ಮಂಗಳವಾರ, ಏಪ್ರಿಲ್ 7, 2020
19 °C

ದೆಹಲಿ ಹಿಂಸಾಚಾರ: ಮಂದಿರ, ಮಸೀದಿ ಮೈಕ್‌ಗಳಿಂದ ಶಾಂತಿ ಸಂದೇಶ ಬಿತ್ತರಕ್ಕೆ ಆದೇಶ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಶಾಂತಿ ಮರುಸ್ಥಾಪನೆಗಾಗಿ ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಪ್ರಕಟಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಪೊಲೀಸರಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವಿಲ್ಲ. ಮೇಲಿನವರ ಆಜ್ಞೆಯನ್ನು ಮಾತ್ರ ಪಾಲಿಸುವಂತೆ ಅವರಿಗೆ ಸೂಚಿಸಲಾಗಿದೆ. ಹಿಂಸಾಚಾರ ನಿಯಂತ್ರಣಕ್ಕೆ ಇದು ದೊಡ್ಡ ತೊಡಕಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಇತರ ರಾಜ್ಯಗಳಿಂದ ದೆಹಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದರಿಂದ ಹಿಂಸಾಚಾರ ಇನ್ನಷ್ಟು ಹೆಚ್ಚಬಹುದು. ಹೀಗಾಗಿ ದೆಹಲಿಯ ಗಡಿಗಳನ್ನು ಮುಚ್ಚಲಾಗುವುದು. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗುವುದು’ ಎಂದು ಹೇಳಿದರು.

‘ದೇಗುಲಗಳು ಮತ್ತು ಮಸೀದಿಗಳ ಮೈಕ್‌ಗಳಿಂದ ಶಾಂತಿಪಾಲನೆಗೆ ಸಂದೇಶ ಬಿತ್ತರಿಸಲಾಗುವುದು. ಹಿಂಸಾಚಾರ ಪೀಡಿತ ಬೀದಿಗಳಲ್ಲಿ ಸ್ಥಳೀಯ ಶಾಸಕರು ಮತ್ತು ಪೊಲೀಸರು ಸಂಚರಿಸಿ ಶಾಂತಿ ಕಾಪಾಡಲು ಜನರಲ್ಲಿ ಮನವಿ ಮಾಡಲಿದ್ದಾರೆ. ಬೆಂಕಿ ಅನಾಹುತ ಸಂಭವಿಸಿದ ಕಡೆಗೆ ಅಗ್ನಿಶಾಮಕ ವಾಹನಗಳನ್ನು ತುರ್ತಾಗಿ ಕಳಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು... 

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 7ಕ್ಕೆ

ಶಾಸಕರ ತುರ್ತುಸಭೆ ಕರೆದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 

ದೆಹಲಿ ಪರಿಸ್ಥಿತಿ ಅವಲೋಕಿಸಿದ ಅಮಿತ್ ಶಾ 

ಸತ್ತ ನಾಲ್ವರಲ್ಲಿ ಗುಂಡೇಟಿನ ಕುರುಹು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು