ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಪೊಲೀಸ್ ಮೇಲೆ ಗುಂಡು ಹಾರಿಸಿದ ಶಾರೂಖ್ ಬಂಧನ

Last Updated 3 ಮಾರ್ಚ್ 2020, 7:51 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ವಾರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗುಂಡು ಹಾರಿಸಿದ್ದ ಆರೋಪಿ ಮೊಹಮ್ಮದ್ ಶಾರೂಕ್‌ನನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸಲಾಗಿದೆ.

ಪ್ರತಿಭಟನಾಕಾರರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಯುವಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಬಂದೂಕು ತೋರಿಸಿ ಹಿಂದೆ ಸರಿಯುವಂತೆ ಬೆದರಿಕೆ ಹಾಕಿದ್ದ. ಆ ವೇಳೆ ಪೊಲೀಸ್‌ ಅಧಿಕಾರಿ ಯುವಕನ ಬೆದರಿಕೆಗೆ ಜಗ್ಗದೇ, ಎರಡು ಕೈ ಎತ್ತಿ ಮುಂದೆ ಬಂದಾಗ ಯುವಕ ಗುಂಡು ಹಾರಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್‌ನಲ್ಲಿ ಚಿತ್ರಿಕರಿಸಿಕೊಂಡಿದ್ದರು.

ಬಂದೂಕು ಹಿಡಿದಿದ್ದ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕಾರಣ ಆರೋಪಿಯು ತಲೆ ಮರೆಸಿಕೊಂಡಿದ್ದ.

ಒಂದು ವಾರದ ಬಳಿಕ ದೆಹಲಿ ಪೊಲೀಸರು ಶಾರುಕ್‌ನನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೆಹಲಿಯಲ್ಲಿ ನಡೆದಹಿಂಸಾಚಾರದಲ್ಲಿ 47 ಮಂದಿ ಮೃತಪಟ್ಟಿದ್ದು, 200ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT