ಭಾನುವಾರ, ಫೆಬ್ರವರಿ 28, 2021
31 °C

ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಮಾಲಿನ್ಯ ಕ್ಷೀಣ, ಸೌರಶಕ್ತಿ ಉತ್ಪಾದನೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಸ್ಟನ್‌: ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿದ್ದು, ಸೌರ ಫಲಕಗಳ ಮೇಲೆ ಸೂರ್ಯನ ಬೆಳಕು ಪ್ರಕಾಶಮಾನವಾಗಿ ಬೀಳುತ್ತಿರುವುದರಿಂದ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆಯಾಗುತ್ತಿದೆ ಎಂದು ದೆಹಲಿಯಲ್ಲಿ ನಡೆಸಿದ ಸರ್ವೇಯಿಂದ ತಿಳಿದುಬಂದಿದೆ.

ದೆಹಲಿಯಲ್ಲಿ 2017 ಮತ್ತು 2019ರಲ್ಲಿ ಉತ್ಪಾದನೆಯಾದ ವಿದ್ಯುತ್‌ಗೆ ಹೋಲಿಸಿದರೆ ಮಾರ್ಚ್ ತಿಂಗಳ ಅಂತ್ಯದಲ್ಲಿ‌ ಶೇಕಡ 8ರಷ್ಟು ಹೆಚ್ಚು ಉತ್ಪಾದನೆಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಮಾಲಿನ್ಯಗೊಂಡ ನಗರದಲ್ಲಿ ದೆಹಲಿಯೂ ಒಂದು. ಆದರೆ, ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಏಕಾಏಕಿ ಮಾಲಿನ್ಯ ಕಡಿಮೆಯಾಗಿದೆ. ಇದರಿಂದಾಗಿ ಸೌರ ಫಲಕಗಳ ಮೇಲೆ ಬೆಳಕು ಪ್ರಕಾಶಮಾನವಾಗಿ ಬೀಳುತ್ತಿದೆ ಎಂದು ಅಮೆರಿಕದ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಡೆಸಿದ ಸಂಶೋಧನೆಯಲ್ಲಿ ತಿಳಿದುಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು