ಗುರುವಾರ , ಫೆಬ್ರವರಿ 27, 2020
19 °C

ಮೋದಿ–ಶಾ ಅವರಿಂದ ಪ್ರಜಾಪ್ರಭುತ್ವ ಬುಡಮೇಲು ಮಾಡುವ ಕೃತ್ಯ: ಸೋನಿಯಾ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ನಾಚಿಕೆಗೇಡಿನ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಟುಟೀಕೆ ಮಾಡಿದ್ದಾರೆ.

ಶಿವಸೇನಾ–ಎನ್‌ಸಿಪಿ–ಕಾಂಗ್ರೆಸ್‌ ಮೈತ್ರಿಕೂಟವು ಈ ಪ್ರಯತ್ನವನ್ನು ತಡೆದಿದೆ ಎಂದು ಅವರು ಹೇಳಿದ್ದಾರೆ. 

ಬಿಜೆಪಿ ನಡೆಸುವ ಅಪಪ್ರಚಾರವನ್ನು ತಡೆಯಲು ಮೂರು ಪಕ್ಷಗಳ ಮೈತ್ರಿಕೂಟವು ಕಟಿ
ಬದ್ಧವಾಗಿ ಕೆಲಸ ಮಾಡಲಿದೆ ಎಂದೂ ಅವರು ತಿಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. 

ಜನರ ದಿನನಿತ್ಯದ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯುವುದಕ್ಕೆ ಮೋದಿ–ಶಾ ಜೋಡಿಯು ವಿಭಜನೆ ನೀತಿ ಅನುಸರಿಸುತ್ತಿದೆ. ಸಭ್ಯತೆ ವಿಚಾರದಲ್ಲಿ ಅವರು ದಿವಾಳಿಯಾಗಿದ್ದಾರೆ. ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಹೇಗೆ ಪರಿಹರಿಸಬೇಕು ಎಂಬುದರ ಲವಲೇಶ ಅರಿವೂ ಅವರಿಗೆ ಇಲ್ಲ ಎಂದು ಸೋನಿಯಾ ಹರಿಹಾಯ್ದಿದ್ದಾರೆ. 

ಕಾಂಗ್ರೆಸ್‌ ಪಕ್ಷವು ನಾಶವಾಗಲಿದೆ ಎಂಬ ಭಾವನೆಯೇ ಸರಿ ಇಲ್ಲ ಎಂಬುದನ್ನು ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಫಲಿತಾಂಶವು ತೋರಿಸಿಕೊಟ್ಟಿದೆ. ತನ್ನನ್ನು ಬಿಟ್ಟರಿಲ್ಲ ಎಂಬ ಬಿಜೆಪಿಯ ಅಹಂ ಅನ್ನು ಈ ಫಲಿತಾಂಶವು ಟೊಳ್ಳಾಗಿಸಿದೆ. ಹಾಗೆಯೇ ಕಾಂಗ್ರೆಸ್‌ ಪಕ್ಷದ ನೈತಿಕತೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ. 

ಶರಣಾಗುವಂತೆ ಬೆದರಿಕೆ ಒಡ್ಡುವ ತಂತ್ರವನ್ನು ಬಿಜೆಪಿ ಅನುಸರಿಸಲಿದೆ ಎಂಬ ಎಚ್ಚರಿಕೆಯನ್ನು ಪಕ್ಷದ ಸಹೋದ್ಯೋಗಿಗಳಿಗೆ ಸೋನಿಯಾ ಅವರು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು