ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳೆಯರಿಗೆ ಕಮಾಂಡರ್ ಹುದ್ದೆ ನಿರಾಕರಣೆ ಪ್ರಗತಿ ವಿರೋಧಿ’

Last Updated 9 ಫೆಬ್ರುವರಿ 2020, 17:04 IST
ಅಕ್ಷರ ಗಾತ್ರ

ನವದೆಹಲಿ: ‘ದೈಹಿಕ ಮಿತಿ ಆಧಾರದ ಮೇಲೆ ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡರ್‌ ಹುದ್ದೆಗಳನ್ನು ನಿರಾಕರಿಸುವ ಕೇಂದ್ರ ಸರ್ಕಾರದ ನಿರ್ಣಯ ಪ್ರಗತಿ ವಿರೋಧಿಯಾದುದು. ಇದು ಪ್ರಸ್ತುತ ಇರುವ ದಾಖಲೆಗಳಿಗೆ ವಿರೋಧಾಭಾಸ’ ಎಂದು ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮಾಹಿತಿ ಸಲ್ಲಿಸಿದ್ದಾರೆ.

‘ಮಹಿಳೆಯರಿಗೆ ಕಮಾಂಡರ್ ಹುದ್ದೆ ನಿರಾಕರಿಸಲು ಕೇಂದ್ರ ಸರ್ಕಾರ ನೀಡುತ್ತಿರುವ ಕಾರಣ ದುರದೃಷ್ಟಕರ. ಈ ಕಾರಣವನ್ನು ಸುಪ್ರೀಂ ಕೋರ್ಟ್ ನಿರಾಕರಿಸಬೇಕು’ ಎಂದು ‘ಸುಪ್ರೀಂ’ಗೆ ಸಲ್ಲಿಸಿರುವ ಲಿಖಿತ ಅರ್ಜಿಯಲ್ಲಿ ಮಹಿಳಾ ಅಧಿಕಾರಿಗಳು ಕೋರಿದ್ದಾರೆ.

‘ಸೇನೆಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಮಹಿಳಾ ಅಧಿಕಾರಿಗಳು ಸಮಾನವಾಗಿ ಶ್ರಮಿಸುತ್ತಿದ್ದಾರೆ. ಶಾಂತಿಯುತ ಹಾಗೂ ಬಿಕ್ಕಟ್ಟು ಪೀಡಿತ ಪ್ರದೇಶ ಎರಡೂ ಕಡೆಗಳಲ್ಲಿ ಮಹಿಳೆಯರು ಯೋಧರ ಪಡೆಯನ್ನು ಮುನ್ನಡೆಸಿದ್ದಾರೆ. ಯೋಧರು ಮಹಿಳೆಯರ ನಾಯಕತ್ವವನ್ನು ನಿರಾಕರಿಸಿದ ಉದಾಹರಣೆಯೇ ಇಲ್ಲ. ತಮಗೆ ವಹಿಸಲಾದ ಜವಾಬ್ದಾರಿಯನ್ನು ಮಹಿಳಾ ಅಧಿಕಾರಿಗಳು ಸಮರ್ಥವಾಗಿ ನಿಭಾಯಿಸಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.‌

ವಾಯುಪಡೆ ಹಾಗೂ ನೌಕಾಪಡೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಕಮಾಂಡರ್ ಹುದ್ದೆಗಳನ್ನು ನೀಡುವ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಇದೇ 11ರಂದು ಪರಿಶೀಲನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT