ನವದೆಹಲಿ: ಮುಂದಿನ ತಿಂಗಳು ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಕ್ಷದಿಂದ ಟಿಕೆಟ್ ದೊರೆಯಲಿಲ್ಲ ಎಂದು ಬೇಸತ್ತು ಆಮ್ ಆದ್ಮಿ ಪಕ್ಷದ ಶಾಸಕ ಸುರೇಂದರ್ ಸಿಂಗ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ನಾನು ದುಃಖಿತನಾಗಿದ್ದೇನೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಫೆಬ್ರವರಿ 8ರಂದು ದೆಹಲಿಯಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.