ಮಂಗಳವಾರ, ಅಕ್ಟೋಬರ್ 15, 2019
28 °C

ಚುನಾವಣಾ ಹೊಣೆ: ಶಿಕ್ಷಕರ ಹೊರೆ ತಗ್ಗಿಸಲು ಸೂಚನೆ

Published:
Updated:

ನವದೆಹಲಿ: ಚುನಾವಣೆಯ ಮುಖ್ಯ ಕೆಲಸಗಳಿಗೆ ಮಾತ್ರ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸೂಚನೆ ನೀಡಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ ಮಾಹಿತಿ ಸಂಗ್ರಹದಂತಹ ಕೆಲಸಗಳಿಗೆ ಶಿಕ್ಷಕರನ್ನು ಬಳಸಬಾರದು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವಾಲಯ ತಿಳಿಸಿದೆ.

ಚುನಾವಣಾ ಸಂಬಂಧಿ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸುವುದರಿಂದ ಅವರ ಆದ್ಯತೆಯ ಕೆಲಸವಾದ ಬೋಧನೆಗೆ ಹಿನ್ನಡೆಯಾಗುತ್ತಿದೆ ಎಂಬುದನ್ನು ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಇತರೆ ಇಲಾಖೆಗಳ ಸಿಬ್ಬಂದಿಯನ್ನೂ ಮತಗಟ್ಟೆ ಅಧಿಕಾರಿಗಳಾಗಿ ನಿಯೋಜಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. 

 

Post Comments (+)