ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನ ಧಾರಾವಿ: ಸೋಂಕು ದುಪ್ಪಟ್ಟಾಗುವ ಅವಧಿ 78 ದಿನ

Last Updated 22 ಜೂನ್ 2020, 5:34 IST
ಅಕ್ಷರ ಗಾತ್ರ

ಮುಂಬೈ: ಕಟ್ಟುನಿಟ್ಟಿನ ಕಂಟೈನ್‌ಮೆಂಟ್‌ ಕ್ರಮದಿಂದಾಗಿಏಷ್ಯಾದ ಅತ್ಯಂತ ದೊಡ್ಡ ಕೊಳೆಗೇರಿ ಧಾರಾವಿಯಲ್ಲಿ ಕೊರೊನಾ ಸೋಂಕು ವ್ಯಾಪಿಸುವುದು ನಿಯಂತ್ರಣಕ್ಕೆ ಬರುತ್ತಿದೆ. ಈ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಲು 78 ದಿನಗಳನ್ನು ತೆಗೆದುಕೊಳ್ಳುತ್ತಿದೆ.

ಕೋವಿಡ್‌–19 ಹಾಟ್‌ಸ್ಪಾಟ್‌ ಎಂದೇ ಗುರುತಿಸಿಕೊಂಡಿದ್ದ ಧಾರಾವಿಯಲ್ಲಿ ಏಳರಿಂದ ಹತ್ತು ಲಕ್ಷ ಜನ ಇಲ್ಲಿ ವಾಸಿಸುತ್ತಿದ್ದಾರೆ. ಈ ಪೈಕಿ ಶೇ 80ರಷ್ಟು ಜನರು ಸಾರ್ವಜನಿಕ ಶೌಚಾಲಯಗಳನ್ನು ಬಳಸುತ್ತಿದ್ದಾರೆ. ಹೀಗಾಗಿ ಆರಂಭಿಕ ಹಂತದಲ್ಲಿ ಈ ಪ್ರದೇಶದಲ್ಲಿ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿತ್ತು. ಇದನ್ನು ತಡೆಗಟ್ಟಲು ಮಹಾರಾಷ್ಟ್ರ ಸರ್ಕಾರ ಹಾಗೂ ಬೃಹತ್‌ ಮುಂಬೈ ಮಹಾನಗರ ಪಾಲಿಕೆ ತೆಗೆದುಕೊಂಡ ಕ್ರಮಗಳು ಕ್ರಮೇಣ ಫಲಿತಾಂಶ ನೀಡುತ್ತಿದೆ.

ಮುಂಬೈನಲ್ಲಿ ಪ್ರಸ್ತುತ ಸೋಂಕಿತರ ಸಂಖ್ಯೆ 65 ಸಾವಿರ ಮೀರಿದ್ದು,ಪ್ರತಿ 34 ದಿನಕ್ಕೊಮ್ಮೆ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಏಪ್ರಿಲ್‌ 1ರಂದು ಧಾರಾವಿಯಲ್ಲಿ ಮೊದಲ ಕೋವಿಡ್‌–196 ಪ್ರಕರಣ ದಾಖಲಾಗಿತ್ತು. ಏಪ್ರಿಲ್‌ ಮಾಸಾಂತ್ಯಕ್ಕೆ ಈ ಸಂಖ್ಯೆ 491ಕ್ಕೆ ಏರಿಕೆಯಾಗಿತ್ತು.ಪ್ರಸ್ತುತ 2,158 ಜನರು ಸೋಂಕಿಗೆ ತುತ್ತಾಗಿದ್ದು, 77 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT