ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಂಸ ಮಾತ್ರವೇಕೆ, ನಾಯಿ ಮಾಂಸವನ್ನೂ ತಿನ್ನಿ: ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ

ತೃಣಮೂಲ ಕಾಂಗ್ರೆಸ್ ತೀವ್ರ ಆಕ್ಷೇಪ
Last Updated 5 ನವೆಂಬರ್ 2019, 4:02 IST
ಅಕ್ಷರ ಗಾತ್ರ

ಕೋಲ್ಕತ್ತ:ಗೋಮಾಂಸ ತಿನ್ನುವವರು ಅದನ್ನು ಮಾತ್ರವೇ ಏಕೆ, ನಾಯಿ ಮಾಂಸವನ್ನೂ ತಿನ್ನಲಿ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ ಗೋಮಾಂಸ ತಿನ್ನುತ್ತಾರೆ. ಅಂತಹವರಿಗೆ ನಾಯಿ ಮಾಂಸವನ್ನೂ ತಿನ್ನಿ ಎಂದು ನಾನು ಹೇಳುತ್ತೇನೆ. ಅವರು ಯಾವುದೇ ಪ್ರಾಣಿಯ ಮಾಂಸ ತಿನ್ನಲಿ, ಅವರ ಆರೋಗ್ಯ ಚೆನ್ನಾಗಿರಲಿ. ಆದರೆ ರಸ್ತೆಯಲ್ಲೇಕೆ ತಿನ್ನಬೇಕು? ಅವರವರ ಮನೆಯಲ್ಲಿ ತಿನ್ನಲಿ’ ಎಂದು ಹೇಳಿದ್ದಾರೆ.

‘ಗೋವು ನಮ್ಮ ತಾಯಿ, ಗೋವಿನ ಹಾಲು ಕುಡಿದು ನಾವು ಬದುಕುತ್ತೇವೆ. ಹೀಗಾಗಿ, ಯಾರಾದರೂ ಗೋವಿನ ಜತೆ ಕೆಟ್ಟದಾಗಿ ವರ್ತಿಸಿದರೆ ಅವರನ್ನು ಹೇಗೆ ನಡೆಸಿಕೊಳ್ಳಬೇಕೋ ಹಾಗೆ ನಡೆಸಿಕೊಳ್ಳಲಿದ್ದೇನೆ. ಭಾರತದ ಪವಿತ್ರ ಮಣ್ಣಿನಲ್ಲಿ ಗೋ ಹತ್ಯೆ ಮತ್ತು ಗೋಮಾಂಸ ಸೇವನೆ ಅಪರಾಧ’ ಎಂದು ಅವರು ಹೇಳಿದ್ದಾರೆ.

ದಿಲೀಪ್ ಘೋಷ್ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹೇಳಿಕೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಟಿಎಂಸಿ ಶಾಸಕಿ ನಿರ್ಮಲ್ ಘೋಷ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT