‘ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಿ’

7
ರಾಹುಲ್‌ ಭೇಟಿ ಮಾಡಿದ ದಿನೇಶ್‌, ಖಂಡ್ರೆ

‘ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಿ’

Published:
Updated:

ನವದೆಹಲಿ: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ’ ಎಂದು ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಈಶ್ವರ ಖಂಡ್ರೆ ಅವರೊಂದಿಗೆ ಮಂಗಳವಾರ ಸಂಜೆ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾಗಿ ಹೇಳಿದರು.

ಪಕ್ಷವನ್ನು ರಾಜ್ಯದಾದ್ಯಂತ ಮತ್ತಷ್ಟು ಬಲಪಡಿಸುವಂತೆ ಕಿವಿಮಾತು ಹೇಳಿದ ರಾಹುಲ್‌, ಲೋಕಸಭೆ ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸುವತ್ತ ಕಾರ್ಯಕರ್ತರನ್ನು ಸನ್ನದ್ಧಗೊಳಿಸುವಂತೆ ಸೂಚಿಸಿದರು ಎಂದು ಅವರು ತಿಳಿಸಿದರು.

‘ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪಕ್ಷದ ರಾಜ್ಯ ಉಸ್ತುವಾರಿ  ಕೆ.ಸಿ. ವೇಣುಗೋಪಾಲ್‌ ಭಾಗವಹಿಸಲಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !