ಸರ್ಕಾರ ಅಸ್ಥಿರಕ್ಕೆ ತನಿಖಾ ಸಂಸ್ಥೆಗಳ ದುರ್ಬಳಕೆ; ಡಿ.ಕೆ. ಸುರೇಶ್ ಆರೋಪ

7

ಸರ್ಕಾರ ಅಸ್ಥಿರಕ್ಕೆ ತನಿಖಾ ಸಂಸ್ಥೆಗಳ ದುರ್ಬಳಕೆ; ಡಿ.ಕೆ. ಸುರೇಶ್ ಆರೋಪ

Published:
Updated:

ಬೆಂಗಳೂರು: ‘ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಧಾನಿ ನರೇಂದ್ರಿ ಮೋದಿ ಅವರ ಕಾರ್ಯಾಲಯವು ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಗಂಭೀರ ಆರೋಪ ಮಾಡಿದರು.

‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಬೆನ್ನಿಗೆ ನನ್ನ ಅಣ್ಣ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್‌ ನಿಂತಿದೆ. ಸರ್ಕಾರವನ್ನು ಉರುಳಿಸಲು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬೆದರಿಸುವ ಮತ್ತು ಆಮಿಷ ಒಡ್ಡುವ ತಂತ್ರವನ್ನು ಬಳಸುತ್ತಿದ್ದಾರೆ. ಆದಾಯ ತೆರಿಗೆ (ಐ.ಟಿ) ಇಲಾಖೆ, ಸಿಬಿಐ, ಜಾರಿ ನಿರ್ದೇಶನಾಲಯಗಳನ್ನು ಬಳಸಿಕೊಳ್ಳುತ್ತಿದ್ದಾರೆ.

ಈ ವಿಷಯ ಪ್ರಧಾನಿಯವರಿಗೆ ಗೊತ್ತಿದೆಯೋ ಇಲ್ಲವೋ. ಪ್ರಧಾನಿ ಕಾರ್ಯಾಲಯ ಹಾಗೂ ಬಿಜೆಪಿ ನಾಯಕರ ಕುತಂತ್ರದ ಬಗ್ಗೆ ಮಾಹಿತಿ ನೀಡಲು ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ’ ಎಂದು ತಿಳಿಸಿದರು.

‘ಶಿವಕುಮಾರ್‌ ಮೇಲೆ ಒತ್ತಡ ಹೇರಿ, ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ‘ಮಿಷನ್‌–25’ಕ್ಕೆ ಮುಂದಾಗಿದ್ದಾರೆ’ ಎಂದು ಆರೋಪಿಸಿದ ಸುರೇಶ್‌, ‘ಕೇಂದ್ರದ ತನಿಖಾ ಸಂಸ್ಥೆಗಳು ಸಿಬಿಐ ಮೋರ್ಚಾ, ಇ.ಡಿ ಮೋರ್ಚಾ, ಐ.ಟಿ ಮೋರ್ಚಾಗಳಾಗಿವೆ’ ಎಂದು ವ್ಯಂಗ್ಯವಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !