ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಎಸ್.ಚಿನ್ನಸ್ವಾಮಿ ನಿಧನ

Last Updated 19 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಎಸ್‌.ಚಿನ್ನಸ್ವಾಮಿ (70) ಬೆಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಕೇಂದ್ರ ಲೋಕೋಪಯೋಗಿ ಇಲಾಖೆಯಲ್ಲಿ ಹೆಚ್ಚುವರಿ ಸಹಾಯಕ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. 2010ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಅಂಬೇಡ್ಕರ್ ಪ್ರಶಸ್ತಿ, ಅನಕೃ ಟ್ರಸ್ಟ್‌ ವತಿಯಿಂದ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಸ್ವಗ್ರಾಮ ಮಾಂಬಳ್ಳಿಯಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT