ಗುರುವಾರ , ಏಪ್ರಿಲ್ 2, 2020
19 °C

ಸೇನೆಯನ್ನು ಕರೆಯಲು ಬಲವಂತ ಮಾಡಬೇಡಿ: ಮಹಾರಾಷ್ಟ್ರದ ಜನರಿಗೆ ಸರ್ಕಾರ ಎಚ್ಚರಿಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Ajit pawar

ಮುಂಬೈ: ಕೊರೊನಾ ವೈರಸ್  ಹರಡುವಿಕೆ ನಿಯಂತ್ರಣಕ್ಕಾಗಿ ದೇಶವ್ಯಾಪಿ ಲಾಕ್‍ಡೌನ್ ಆಗಿದ್ದರೂ ಮಹಾರಾಷ್ಟ್ರದಲ್ಲಿ ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಈ ವೇಳೆ ಕೆಲವೆಡೆ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮೇಲೆ ಜನರು ಹಲ್ಲೆ ನಡೆಸಿದ ಪ್ರಕರಣಗಳು ವರದಿಯಾಗಿವೆ.

ಪರಿಸ್ಥಿತಿಯ ಗಾಂಭೀರ್ಯವನ್ನು ಅರ್ಥ ಮಾಡಿಕೊಳ್ಳದಿರುವ ಜನರ ವಿರುದ್ಧ ಗುಡುಗಿದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಜನರು ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅಜಿತ್ ಪವಾರ್, ಕಾನೂನು ಉಲ್ಲಂಘಿಸುವ ಜನರ ವಿರುದ್ಧ  ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಪೊಲೀಸ್ ಮತ್ತು ಜನರು ಶಿಸ್ತು ಅಳವಡಿಸಿಕೊಳ್ಳಬೇಕು. ಅಮೆರಿಕದಲ್ಲಿ ಲಾಕ್‍ಡೌನ್ ಜಾರಿಗೆ ತರಲು ಸೇನೆಯನ್ನೇ ಕರೆತರಬೇಕಾಯಿತು. ಆ ಹಂತಕ್ಕೆ ತಲುಪಬಾರದು ಎಂಬುದು ನಮ್ಮ ಜವಾಬ್ದಾರಿ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು