ಗುರುವಾರ , ಆಗಸ್ಟ್ 5, 2021
26 °C

ಉತ್ತರ ಪ್ರದೇಶ: ಕೋವಿಡ್‌ಗೆ ವೈದ್ಯ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಹ್ರೇಚ್: ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯಲ್ಲಿ 65 ವರ್ಷದ ವೈದ್ಯರೊಬ್ಬರು ಕೋವಿಡ್‌ 19ರಿಂದ ಮೃತಪಟ್ಟಿದ್ದಾರೆ. 

ಜಾರ್ವಾಲ್‌ ಪ್ರದೇಶದ ನಿವಾಸಿಯಾಗಿದ್ದ ಡಾ. ಜಹೀರ್‌ ಅಲಂ ಮೃತಪಟ್ಟ ವೈದ್ಯರು. ಅವರು ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 

ಅವರನ್ನು ಚಿಕಿತ್ಸೆಗೆಂದು ಲಖನೌದ ಎರಾ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ಸುರೇಶ್‌ ಸಿಂಗ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು