ಸೋಮವಾರ, ಆಗಸ್ಟ್ 2, 2021
23 °C

ಉನ್ನಾವ್ ಸಂತ್ರಸ್ತೆ ತಂದೆಗೆ ಚಿಕಿತ್ಸೆ ನೀಡಿದ್ದ ವೈದ್ಯ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಉನ್ನಾವ್: ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಚಿಕಿತ್ಸೆ ನೀಡಿದ್ದ ವೈದ್ಯರು ಸೋಮವಾರ ಸಂಜೆ ಶಂಕಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಶಾಂತ್ ಉಪಾಧ್ಯಾಯ (45) ಸಾವನ್ನಪ್ಪಿದ ವೈದ್ಯ. ಸುಸ್ತಿನಿಂದ ಬಳಲುತ್ತಿದ್ದ ಪ್ರಶಾಂತ್ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ದಾಖಲಾಗಿದ್ದರು. ಅವರಿಗೆ ಸಕ್ಕರೆ ಕಾಯಿಲೆ ಇತ್ತು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿದ್ದಾಗ ಉನ್ನಾವ್ ಸಂತ್ರಸ್ತೆಯ ತಂದೆ ತೀವ್ರ ಥಳಿತಕ್ಕೊಳಗಾಗಿದ್ದರು. ಆಗ ಪ್ರಶಾಂತ್ ಸಂತ್ರಸ್ತೆಯ ತಂದೆಗೆ ಚಿಕಿತ್ಸೆ ನೀಡಿದ್ದರು. ಈ ಸಂಬಂಧ ಪ್ರಶಾಂತ್ ಅವರನ್ನು ಸಿಬಿಐ ತನಿಖೆಗೊಳಪಡಿಸಿತ್ತು. ಪ್ರಶಾಂತ್ ಪ್ರಸ್ತುತ ಫೌತೇಪುರ್‌ದಲ್ಲಿ ಕೆಲಸ ಮಾಡುತ್ತಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು