ಬುಧವಾರ, ಸೆಪ್ಟೆಂಬರ್ 22, 2021
22 °C

ಹಿಜ್‍ಬುಲ್‍ ಸಂಘಟನೆ ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖುಲ್‍ ಚೊಹರ್ ಪ್ರದೇಶದಲ್ಲಿ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಹಿಜ್‍ಬುಲ್‍ ಮುಜಾಹಿದ್ದೀನ್‍ ಸಂಘಟನೆ ಕಮಾಂಡರ್ ಮಸೂದ್‍ ಸೇರಿ ಇಬ್ಬರು ಉಗ್ರರು ಸತ್ತಿದ್ದಾರೆ.

ಸಿಆರ್ಪಿಎಫ್ ಪಡೆಯು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಈ ಭಾಗದಲ್ಲಿ ಬಾಕಿ ಉಳಿದಿದ್ದ ಉಗ್ರರು ಹತರಾಗಿದ್ದು, ಇದರೊಂದಿಗೆ ಈ ಪ್ರದೇಶ ಭಯೋತ್ಪಾದಕ ಚಟುವಟಿಕೆಗಳಿಂದ ಮುಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಸೂದ್ ಈ ಭಾಗದಲ್ಲಿ ಕಡೆಯದಾಗಿ ಉಳಿದುಕೊಂಡಿದ್ದ. ಈತ ದೋಡಾ ನಿವಾಸಿಯಾಗಿದ್ದು ಅತ್ಯಾಚಾರ ಪ್ರಕರಣದಲ್ಲಿ ಬೇಕಾಗಿದ್ದು, ತಲೆಮರೆಸಿಕೊಂಡಿದ್ದ. ಬಳಿಕ ಉಗ್ರ ಸಂಘಟನೆಯನ್ನು ಸೇರಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು