ಬುಧವಾರ, ಮೇ 27, 2020
27 °C

ಕೋವಿಡ್ -19 | ಪ್ರತಿದಿನ 50 ಸಾವಿರ N95 ಮಾಸ್ಕ್ ತಯಾರಿಕೆ, ವಿತರಣೆ: ಆರೋಗ್ಯಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್-19 ತಡೆಗೆ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸೋಂಕು ತಡೆಗೆ N95 ಮಾಸ್ಕ್ ಪರಿಣಾಮಕಾರಿಯಾಗಿದ್ದು, ಪ್ರತಿದಿನ 50 ಸಾವಿರ ಮಾಸ್ಕ್‌ಗಳನ್ನು ದೇಶೀಯ ಕಂಪನಿಗಳೇ ತಯಾರಿಸುತ್ತಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮುಂಬರುವ ವಾರದಲ್ಲಿ ಈ ಕಂಪನಿಗಳಲ್ಲಿ ಪ್ರತಿದಿನ ಮಾಸ್ಕ್‌‌ಗಳ ತಯಾರಿಕಾ ಸಾಮರ್ಥ್ಯವನ್ನು 1 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಅಲ್ಲದೆ, ಪ್ರಸ್ತುತ ದೇಶದ ಎಲ್ಲಾ ಆಸ್ಪತ್ರೆಗಳಲ್ಲಿ 11.95 ಲಕ್ಷ N95 ಮಾಸ್ಕ್‌‌ಗಳು ಇವೆ. ಕಳೆದ ಎರಡು ದಿನಗಳಿಂದ ಹೆಚ್ಚುವರಿಯಾಗಿ 5 ಲಕ್ಷ  ಮಾಸ್ಕ್‌‌ಗಳನ್ನು ವಿತರಿಸಲಾಗಿದೆ.

ಈ ದಿನ ಹೆಚ್ಚುವರಿಯಾಗಿ 1.40 ಲಕ್ಷ ಮಾಸ್ಕ್ ಗಳನ್ನು ವಿತರಿಸಲಾಗುತ್ತಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು