ಭಾನುವಾರ, ಮಾರ್ಚ್ 29, 2020
19 °C

ಚಾಯ್‌ವಾಲಾ ಮೋದಿ ತುಂಬಾ ಟಫ್: ಭಾರತದ ಪ್ರಧಾನಿಯ ಹೊಗಳಿದ ಡೊನಾಲ್ಡ್ ಟ್ರಂಪ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಪರಿಶ್ರಮ ಮತ್ತು ಬದ್ಧತೆಗೆ ಪ್ರತೀಕ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿದ್ದಾರೆ.

ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅವರು ‘ನಮಸ್ತೆ ಟ್ರಂಪ್’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮೋದಿ ಅವರು ಕೇವಲ ಗುಜರಾತ್‌ನ ಹೆಮ್ಮೆಯಲ್ಲ. ಪರಿಶ್ರಮ ಮತ್ತು ಬದ್ಧತೆಗೆ ಪ್ರತೀಕ. ಭಾರತೀಯರು ತಾವು ಅಂದುಕೊಂಡದ್ದನ್ನು ಸಾಧಿಸಬಲ್ಲರು. ಭಾರತವನ್ನು ಮೋದಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ’ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 

‘ನಾವು ಈ ಸಂದರ್ಭವನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡಿರುತ್ತೇವೆ. ಚಹಾ ಮಾರುತ್ತಿದ್ದ ನರೇಂದ್ರ ಮೋದಿ ಇಂದು ಪ್ರಧಾನಿಯಾಗಿದ್ದಾರೆ. ಎಲ್ಲರೂ ಅವರನ್ನು ಪ್ರೀತಿಸುತ್ತಾರೆ. ಎಲ್ಲರೂ ನಮ್ಮನ್ನು ಪ್ರೀತಿಸುವಂತೆ ಬಾಳುವುದು ತುಂಬಾ ಕಷ್ಟ’ ಎಂದೂ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

ಭಾರತದೊಂದಿಗೆ ಅಮೆರಿಕ ಅದ್ಭುತ ಒಪ್ಪಂದವೊಂದಕ್ಕೆ ಸಹಿ ಹಾಕಲಿದೆ ಎಂದು ಡೊನಾಲ್ಡ್‌ ಟ್ರಂಪ್ ಹೇಳಿದ್ದಾರೆ. ಒಪ್ಪಂದದ ಬಗ್ಗೆ ಮಾತನಾಡುವ ಸಂದರ್ಭ, ‘ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಚೌಕಾಸಿ ಮಾಡೋದು ತುಂಬಾ ಕಷ್ಟ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು