ಭಾನುವಾರ, ಮಾರ್ಚ್ 29, 2020
19 °C

ರೋಡ್‌ಷೋ: ಸಾವಿರಾರು ಮಂದಿ ಭಾಗಿ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌ : 22 ಕಿ.ಮೀ ದೂರದ ಮೊಟೆರಾ ಕ್ರೀಡಾಂಗಣದವರೆಗೆ ರೋಡ್‌ ಷೋ ನಡೆಸಿದ ಟ್ರಂಪ್‌ ದಂಪತಿಯನ್ನು ಗುಜರಾತ್‌ನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಸ್ವಾಗತಿಸಿದರು.  

ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು, ಅಮೆರಿಕ ಮತ್ತು ಭಾರತದ ಬಾವುಟಗಳನ್ನು ಹಿಡಿದು  ಸ್ವಾಗತಿಸಿದರು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಕಲಾವಿದರು ದಾರಿಯ ಮಧ್ಯೆ ಅಲ್ಲಲ್ಲಿ ನಿರ್ಮಿಸಿದ್ದ 30 ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. 

ರೋಡ್‌ ಷೋನಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಮೊಟೆರಾ ಕ್ರೀಡಾಂಗಣಕ್ಕೆ ಪ್ರವೇಶ ಸಿಗಲಿಲ್ಲ. ಪಾಸ್‌ ಸಿಗದ ಕಾರಣ ಕೆಲವರು ನಿರಾಶರಾಗಿ ಸಾಬರಮತಿ ಆಶ್ರಮಕ್ಕೆ ತೆರಳಿದರೆ ಮತ್ತೆ ಕೆಲವರು ಸ್ವಗ್ರಾಮಗಳಿಗೆ ವಾಪಸಾದದ್ದು ಕಂಡು ಬಂತು. ‘ನಮಸ್ತೆ ಟ್ರಂಪ್‌’ ಕಾರ್ಯಕ್ರಮವನ್ನು ಪರದೆಯಲ್ಲಿ ವೀಕ್ಷಿಸಲು ಸಾಬರಮತಿ ಆಶ್ರಮದಲ್ಲಿ ವ್ಯವಸ್ಥೆ ಮಾಡಲಾಗಿತ್ತು.  

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು