ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಂ ವ್ಯಾಪಾರಿಗಳಿಂದ ತರಕಾರಿ ಖರೀದಿಸಬೇಡಿ‌: ಬಿಜೆಪಿ ಶಾಸಕ

Last Updated 28 ಏಪ್ರಿಲ್ 2020, 20:25 IST
ಅಕ್ಷರ ಗಾತ್ರ

ಲಖನೌ: ‘ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಣಗೊಳಿಸಬೇಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದರೂ ಅವರದೇ ಪಕ್ಷದ ಉತ್ತರ ಪ್ರದೇಶದ ಶಾಸಕರೊಬ್ಬರು ‘ಮುಸ್ಲಿಂ ವ್ಯಾಪಾರಿಗಳಿಂದ ತರಕಾರಿ ಖರೀದಿಸಬೇಡಿ’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಉತ್ತರ ಪ್ರದೇಶ ಬರ್ಹಾಜ್‌‌‌ ಕ್ಷೇತ್ರದ ಶಾಸಕರಾಗಿರುವ ಸುರೇಶ್‌ ತಿವಾರಿ ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಆಡಿದ ಈ ಮಾತುಗಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ವೈರಲ್‌ ಆಗಿದೆ.

ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದರಿಂದ ಸ್ಪಷ್ಟನೆ ನೀಡಿರುವ ತಿವಾರಿ, ‘ಕೆಲವು ಮುಸ್ಲಿಂ ವ್ಯಾಪಾರಿಗಳುತರಕಾರಿಗೆ ಎಂಜಲು ಹಚ್ಚಿ ಕೊರೊನಾ ಹಬ್ಬಿಸುತ್ತಿರುವುದಾಗಿ ನನ್ನ ಬೆಂಬಲಿಗರು ದೂರಿದ್ದರು. ಇದಕ್ಕೆ ‘ಅಂಥವರಿಂದ ಖರೀದಿ ಮಾಡುವುದನ್ನು ನಿಲ್ಲಿಸಿ’ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಸಮರ್ಥಿಸಿಕೊಂಡರು.

ಶೋಕಾಸ್‌ ನೋಟಿಸ್‌: ‌ಕೋಮುದ್ವೇಷ ಹರಡುತ್ತಿರುವ ಸುರೇಶ್‌ ತಿವಾರಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಇದರ ಬೆನ್ನಲ್ಲೇ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿಯು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT