ಶನಿವಾರ, ಏಪ್ರಿಲ್ 4, 2020
19 °C

ವಿದೂಷಕನಂತೆ ವರ್ತಿಸಬೇಡಿ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳ ವಿಷಯದಲ್ಲಿ ವಿದೂಷಕನಂತೆ ವರ್ತಿಸುತ್ತಾ ದೇಶದ ಸಮಯ ವ್ಯರ್ಥ ಮಾಡುವುದನ್ನು ಬಿಡಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

‘ಪ್ರೀತಿಯ @PMOIndia ದೇಶದಲ್ಲಿ ಹೊಸದಾಗಿ ಕೋವಿಡ್‌–19 ಸೋಂಕು ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ಎದುರಾಗಿದೆ. ಇದನ್ನು ನಿರ್ವಹಿಸುವ ಕುರಿತು ಗಮನವಹಿಸಿ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಪರಿಸ್ಥಿತಿ ಎದುರಿಸುವುದು ಹೇಗೆ ಎನ್ನುವ ಕುರಿತೂ ಟ್ವೀಟ್ ಮಾಡಿರುವ ರಾಹುಲ್, ಸಿಂಗಪುರದಲ್ಲಿ ಜನರು ಕೋವಿಡ್‌ ಸೋಂಕು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಹೇಗೆ ಎನ್ನುವಂತೆ ಅಲ್ಲಿನ ಪ್ರಧಾನಿ ಮಾತನಾಡಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು