ಸೋಮವಾರ, ಮಾರ್ಚ್ 1, 2021
30 °C

ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಮಣಿಯನ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಆರ್ಥಿಕ ತಜ್ಞ ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ಶುಕ್ರವಾರ ನೇಮಕ ಮಾಡಿದೆ. 

ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರು ಹೈದರಾಬಾದ್‌ನಲ್ಲಿರುವ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಸಹಾಯಕ ಪ್ರಾಧ್ಯಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಅರವಿಂದ್‌ ಸುಬ್ರಮಣಿಯನ್‌ ಅವರ ರಾಜಿನಾಮೆಯಿಂದ  ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ನೇಮಿಸಲಾಗಿದೆ. ಅರವಿಂದ್‌ ಸುಬ್ರಮಣಿಯನ್‌ 2018ರ ಜೂನ್‌ 20 ರಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಇವರ ಅಧಿಕಾರದ ಅವಧಿ 2019ರ ಮೇ ವರೆಗೂ ಇತ್ತು. ಅಮೆರಿಕದಲ್ಲಿ ಉನ್ನತ ಅಧ್ಯಯನ ಕೈಗೊಳ್ಳುವ ಇಚ್ಚೆ ವ್ಯಕ್ತಪಡಿಸಿ ಅರವಿಂದ್‌ ಸುಬ್ರಮಣಿಯನ್ ರಾಜಿನಾಮೆ ನೀಡಿದ್ದರು. 

ಅಮೆರಿಕದ ಚಿಕಾಗೊ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಕೃಷ್ಣಮೂರ್ತಿ ಸುಬ್ರಮಣಿಯನ್‌ ಬ್ಯಾಂಕಿಂಗ್‌, ಕಾರ್ಪೋರೆಟ್ ಆಡಳಿತ ಮತ್ತು ಆರ್ಥಿಕ ಮಸೂದೆ ವಿಷಯಗಳಲ್ಲಿ ಪರಿಣಿತಿ ಪಡೆದಿದ್ದಾರೆ. 

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಂ ರಾಜನ್‌ ಅವರ ಮಾರ್ಗದರ್ಶನದಲ್ಲಿ ಎಂಬಿಎ ಹಾಗೂ ಹಣಕಾಸು ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. 

ಬ್ಯಾಂಕಿಂಗ್‌, ಕಾನೂನು ಮತ್ತು ಹಣಕಾಸು, ಆರ್ಥಿಕ ಬೆಳವಣಿಗೆ, ಕಾರ್ಪೊರೇಟ್‌ ಆಡಳಿತದಲ್ಲಿ ಅಧ್ಯಯನ ನಡೆಸಿದ್ದಾರೆ. ಪ್ರಮುಖ ಹಣಕಾಸು ಮತ್ತು ಆರ್ಥಿಕ ಪತ್ರಿಕೆಗಳಿಗೆ ಲೇಖನ ಮತ್ತು ವಿಶ್ಲೇಷಣ ವರದಿಗಳನ್ನು ಬರೆದಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು