ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯೋಗ–ವಿಚಾರಣೆಗೆ ಹೊಸ ನಿಯಮ

Last Updated 25 ಮಾರ್ಚ್ 2019, 20:09 IST
ಅಕ್ಷರ ಗಾತ್ರ

ನವದೆಹಲಿ: ಔಷಧ ಮತ್ತು ವೈದ್ಯಕೀಯ ವಿಧಾನಗಳ ಪರೀಕ್ಷೆ, ಪ್ರಯೋಗ ಮತ್ತು ವಿಚಾರಣೆಗಳಿಗೆ ಸಂಬಂಧಿಸಿದಂತೆ ಹೊಸ ನಿಯಮ ರೂಪಿಸಲಾಗಿದ್ದು, ಈ ಕುರಿತು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ದೇಶದಲ್ಲಿ ಔಷಧ ಉತ್ಪಾದಿಸುವುದಕ್ಕೆ ಸಂಬಂಧಿಸಿದ ಅರ್ಜಿಗಳಿಗೆ ಅನುಮೋದನೆ ನೀಡುವ ಅವಧಿಯನ್ನು 30 ದಿನಗಳಿಗೆ ಕಡಿತಗೊಳಿಸಲಾಗಿದ್ದು, ವಿದೇಶಿಯರಿಗೆ ಈ ಅವಧಿಯನ್ನು 90 ದಿನಗಳಿಗೆ ಹೆಚ್ಚಿಸಲಾಗಿದೆ.

’ರೋಗಿಯ ಸುರಕ್ಷತೆಯನ್ನೇ ಆದ್ಯತೆಯನ್ನಾಗಿಟ್ಟುಕೊಂಡು ಹೊಸ ನಿಯಮಗಳನ್ನು ಸೇರ್ಪಡೆಗೊಳಿಸಲಾಗಿದೆ. ಸಚಿವಾಲಯದ ನೇತೃತ್ವದಲ್ಲಿ ರಚಿಸಲಾಗಿರುವ ವೈದ್ಯರ ಸಮಿತಿಯುಈ ಕುರಿತ ದೂರುಗಳು ಮತ್ತು ರೋಗಿಗೆ ಪರಿಹಾರ ನೀಡುವ ಪ್ರಕರಣಗಳನ್ನು ನಿರ್ವಹಿಸುವ ಕೆಲಸ ಮಾಡಲಿದೆ‘ ಎಂದು ಭಾರತೀಯ ಪ್ರಧಾನ ಔಷಧ ನಿಯಂತ್ರಣಾಧಿಕಾರಿ (ಡಿಸಿಜಿಐ) ಎಸ್. ಈಶ್ವರ ರೆಡ್ಡಿ ತಿಳಿಸಿದ್ದಾರೆ.

‘ಪ್ರಯೋಗ ಅಥವಾ ಪರೀಕ್ಷೆ ವೇಳೆ ಗಾಯಗಳಾದರೆ, ತನಿಖಾಧಿಕಾರಿಗಳ ಅಭಿಪ್ರಾಯದಂತೆ ಆ ರೋಗಿಗೆ ಅಗತ್ಯವಿರುವವರೆಗೆ ವೈದ್ಯಕೀಯ ನೆರವು ನೀಡಲಾಗುವುದು‘ ಎಂದು ಅವರು ತಿಳಿಸಿದ್ದಾರೆ.

’ವೈದ್ಯರ ನಿರ್ಲಕ್ಷ್ಯದಿಂದ ರೋಗಿಯ ಸಾವು ಅಥವಾ ಶಾಶ್ವತ ಅಂಗವೈಕಲ್ಯ ಅಥವಾ ಗಾಯಗೊಂಡರೆ ಅಂತಹ ಪ್ರಕರಣಗಳ ತನಿಖೆಯ ನಿರ್ಧಾರವನ್ನು ಔಷಧ ನಿಯಂತ್ರಣ ಪ್ರಾಧಿಕಾರವು ತೆಗೆದುಕೊಳ್ಳಲಿದೆ‘ ಎಂದು ರೆಡ್ಡಿ ಹೇಳಿದರು.

‘ದೇಶದಲ್ಲಿ ವೈದ್ಯಕೀಯ ಸಂಶೋಧನಾ ಕ್ಷೇತ್ರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ನಿಯಮಗಳನ್ನು ಸೇರ್ಪಡೆಗೊಳಿಸಲಾಗಿದೆ. ಪಾರದರ್ಶಕ ಮತ್ತು ಪರಿಣಾಮಕಾರಿ ನಿಯಮಗಳಿಂದ ಇಂತಹ ಪ್ರಕರಣಗಳ ಶೀಘ್ರ ಇತ್ಯರ್ಥ ಸಾಧ್ಯವಾಗುತ್ತದೆ‘ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT