ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಸಿಗರೇಟ್‌ ನಿಷೇಧಿಸುವ ಸುಗ್ರೀವಾಜ್ಞೆಗೆ ಅನುಮೋದನೆ: ನಿರ್ಮಲಾ ಸೀತಾರಾಮನ್

Last Updated 18 ಸೆಪ್ಟೆಂಬರ್ 2019, 11:47 IST
ಅಕ್ಷರ ಗಾತ್ರ

ನವದೆಹಲಿ: ಇ–ಸಿಗರೇಟ್‌ ಉತ್ಪಾದನೆ, ಆಮದು ಹಾಗೂ ಮಾರಾಟ ನಿಷೇಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

‘ಮಕ್ಕಳು ಮತ್ತು ಯುವಕರ ಆರೋಗ್ಯದ ದೃಷ್ಟಿಯಿಂದ ಇದನ್ನುನಿಷೇಧಿಸುತ್ತಿದ್ದೇವೆ’ ಎಂದುಇ–ಸಿಗರೇಟ್‌ಗೆ ಸಂಬಂಧಿಸಿದ ಸಚಿವರ ಗುಂಪಿನ (ಜಿಒಎಂ) ನೇತೃತ್ವ ವಹಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.

ಇ–ಸಿಗರೇಟ್‌ ಮತ್ತು ವೇಪಿಂಗ್‌ ಉತ್ಪನ್ನಗಳನ್ನು ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮಂಗಳವಾರ ಮನವಿ ಮಾಡಿತ್ತು.

ಈ ಕುರಿತು ಸಚಿವರಿಗೆ ಪತ್ರ ಬರೆದಿರುವ ಸಂಘವು, ‘ಭಾರತದಲ್ಲಿ ಇ–ಸಿಗರೇಟ್‌ ವ್ಯಾಪಾರ ಬೆಳೆಯಲು ಪ್ರೋತ್ಸಾಹ ನೀಡುವುದು ದೇಶದ ತಂಬಾಕು ಬೆಳೆಗಾರರ ಮೇಲೆ ಗದಾಪ್ರಹಾರ ಮಾಡಿದಂತಾಗುತ್ತದೆ’ ಎಂದಿದೆ.

‘ಈ ಉತ್ಪನ್ನಗಳನ್ನು ನಿಷೇಧಿಸಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ವ್ಯವಸ್ಥಿತವಾಗಿ ಅಪಪ್ರಚಾರ ಮಾಡಲಾಗುತ್ತದೆ. ಇದು ಸಂಪೂರ್ಣ ತಪ್ಪು. ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ಕೆಲಸ ಮಾಡುತ್ತಿರುವ ಕೆಲವೇ ಜನರ ಗುಂಪಿನ ಮನವಿ ಸ್ವೀಕರಿಸಬಾರದು’ ಎಂದೂ ಸಂಘವು ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT