7
ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ

ಲೋಕಸಭೆಗೆ ಅವಧಿಪೂರ್ವ ಚುನಾವಣೆ: ಜೈಪಾಲ್ ರೆಡ್ಡಿ

Published:
Updated:
ಜೈಪಾಲ್ ರೆಡ್ಡಿ

ಹೈದರಾಬಾದ್‌: ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡ ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಸೋಲುವ ಭೀತಿ ಎದುರಿಸುತ್ತಿದೆ. ಹೀಗಾಗಿ ಲೋಕಸಭೆಗೆ ಅವಧಿಗೂ ಮುನ್ನವೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಜೈಪಾಲ್ ರೆಡ್ಡಿ ಹೇಳಿದ್ದಾರೆ.

‘ಈ ವರ್ಷಾಂತ್ಯಕ್ಕೆ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿಗೆ ತೀವ್ರ ಹಿನ್ನಡೆಯಾಗಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವರ್ಚಸ್ಸು ಕಳೆದುಕೊಂಡ ಮುಖ ಹೊತ್ತು ಲೋಕಸಭಾ ಚುನಾವಣೆ ಎದುರಿಸಲು ಬಯಸರು’ ಎಂದು ರೆಡ್ಡಿ ಪಿಟಿಐಗೆ ತಿಳಿಸಿದ್ದಾರೆ.

‘ಈ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಆಗಬಹುದಾದ ಹಿನ್ನಡೆಯ ಹೊಣೆಯನ್ನು ಹೊತ್ತುಕೊಳ್ಳಲು ಪ್ರಧಾನಿ ಮೋದಿ ಸಿದ್ಧರಿಲ್ಲ. ಅದರ ಬದಲಾಗಿ ಅವಧಿಗೂ ಮುನ್ನವೇ ಚುನಾವಣೆ ನಡೆಸಬಹುದು. ಆದರೆ, ರಾಜಕೀಯದಲ್ಲಿ ಹೀಗೇ ನಡೆಯುತ್ತದೆ ಎಂದು ಖಚಿತವಾಗಿ ಹೇಳಲು ಸಾಧ್ಯವೇ?’ ಎಂದೂ ಹೇಳಿದರು.

‘ಬಿಜೆಪಿಗೆ ಪ್ರತಿಯಾಗಿ ಮಹಾಮೈತ್ರಿ ರಚನೆಯಾಗಬೇಕಾದರೆ ಸಮಾನ ಮನಸ್ಕ ಎಲ್ಲ ಪಕ್ಷಗಳು ಒಂದಾಗಬೇಕು. ಈ ಪಕ್ಷಗಳು ಚುನಾವಣೆ ನಂತರ ಒಂದುಗೂಡುವುದು ಖಚಿತ. ಆದರೆ, ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದೇ ಆದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯ ಇದೆ’ ಎಂದು ಅಭಿಪ್ರಾಯಪಟ್ಟರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !