ಗುರುವಾರ , ಏಪ್ರಿಲ್ 2, 2020
19 °C

ಇದೇ 26ರಂದು ರಾಜ್ಯಸಭೆಯ 55 ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಇದೇ 26ರಂದು ನಡೆಯಬೇಕಿದ್ದ ರಾಜ್ಯಸಭೆ ಚುನಾವಣೆಯನ್ನು ಕೇಂದ್ರ ಚುನಾವಣೆ ಆಯೋಗ ಮುಂದೂಡಿದಿದೆ.

ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಏಪ್ರಿಲ್‌ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗುತ್ತಿದೆ. ತೆರವಾಗಲಿರುವ ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು ಫೆ. 25ರಂದು ಚುನಾವಣೆ ಘೋಷಿಸಿತ್ತು. ಮಾರ್ಚ್ 6ರಿಂದ ಅಧಿಸೂಚನೆ ಜಾರಿಯಾಗಿತ್ತು.

ಚುನಾವಣೆಗೆ ಇನ್ನೇನು ಎರಡು ದಿನಗಳು ಬಾಕಿ ಉಳಿದಿರುವಾಗಲೇ ಚುನಾವಣೆ ಆಯೋಗ ಮುಂದೂಡಿಕೆ ನಿರ್ಧಾರ ಕೈಗೊಂಡಿದೆ.

ದೇಶದಲ್ಲಿ ಈಗಾಗಲೇ ಸರಿಸುಮಾರು 500 ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)