ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿಸಂಹಿತೆ ಉಲ್ಲಂಘನೆ ವರದಿಗೆ ವಿಶಿಷ್ಟ ಆ್ಯಪ್

Last Updated 3 ಜುಲೈ 2018, 20:04 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಆ ಕುರಿತು ಮಾಹಿತಿ ನೀಡಲು ಸಾಧ್ಯವಾಗುವಂತಹ ಆ್ಯಂಡ್ರಾಯ್ಡ್ ಆಧಾರಿತ ‘cVIGIL’ (ಸಿಟಿಜನ್ಸ್ ವಿಜಿಲ್) ಎನ್ನುವ ವಿಶಿಷ್ಟ ಆ್ಯಪ್‌ವೊಂದನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಅಕ್ರಮವಾಗಿ ಹಣ ಹಂಚುತ್ತಿದ್ದರೆ ಅಥವಾ ದ್ವೇಷಭಾಷಣ ಮಾಡುತ್ತಿದ್ದರೆ ಅದರ ವಿಡಿಯೊ ಹಾಗೂ ಚಿತ್ರಗಳನ್ನು ಈ ಆ್ಯಪ್ ಮೂಲಕ ಕಳುಹಿಸಬಹುದು.

‘ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆಯಲ್ಲಿ ಮಾತ್ರ ಈ ಆ್ಯಪ್ ಕಾರ್ಯನಿರ್ವಹಿಸಲಿದ್ದು, ಗೂಗಲ್ ಪ್ಲೇಸ್ಟೋರ್‌ನಲ್ಲಿ ಇದು ಲಭ್ಯವಾಗಲಿದೆ’ ಎಂದು ಸಿಇಸಿ ಹೇಳಿದೆ.

ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಈ ಆ್ಯಪ್ ಮೊದಲ ಬಾರಿಗೆ ಕಾರ್ಯನಿರ್ವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT