ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ನೀತಿ ಸಂಹಿತೆ ತೆರವು

Last Updated 26 ಮೇ 2019, 18:50 IST
ಅಕ್ಷರ ಗಾತ್ರ

ನವದೆಹಲಿ: ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಹಿಂತೆಗೆದುಕೊಂಡಿದೆ. ಚುನಾವಣೆ ಘೋಷಣೆಯೊಂದಿಗೆ ಮಾರ್ಚ್‌ 10ರಂದು ನೀತಿ ಸಂಹಿತೆ ಜಾರಿಗೆ ಬಂದಿತ್ತು.

ನೀತಿ ಸಂಹಿತೆ ತೆರವು ಕುರಿತಂತೆ ಸಂಪುಟ ಕಾರ್ಯದರ್ಶಿ, ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಆಯೋಗ ಸಂದೇಶವನ್ನು ರವಾನಿಸಿದೆ.

ಚುನಾವಣಾ ಅವಧಿಯಲ್ಲಿ ರಾಜಕೀಯ ಪಕ್ಷಗಳು ಸ್ವಹಿತಾಸಕ್ತಿಗಾಗಿ ಆಡಳಿತ ಯಂತ್ರ ಬಳಸುವುದು, ಧರ್ಮದ ಬಳಕೆ, ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಯುವುದರ ಕ್ರಮವಾಗಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿತ್ತು.

ಏಳು ಹಂತದಲ್ಲಿ 542 ಕ್ಷೇತ್ರಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯು ಮೇ 23ರಂದು ಮತಗಳ ಎಣಿಕೆ ಪ್ರಕ್ರಿಯೆಯೊಂದಿಗೆ ಅಂತ್ಯಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT