ಬುಧವಾರ, ಸೆಪ್ಟೆಂಬರ್ 18, 2019
22 °C

ಮತಚೀಟಿಗೆ ಆಧಾರ್‌ ಜೋಡಣೆ: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗ ಪತ್ರ

Published:
Updated:

ನವದೆಹಲಿ: ‘ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಅವಕಾಶವಾಗುವಂತೆ ಕಾನೂನಿನಲ್ಲಿ ಬದಲಾವಣೆ ತನ್ನಿ’ ಎಂದು ಚುನಾವಣಾ ಆಯೋಗವು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ.

‘ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವುದನ್ನು ತಪ್ಪಿಸಲು ಇದು ಅನಿವಾರ್ಯ’ ಎಂದು ಚುನಾವಣಾ ಆಯೋಗ ಹೇಳಿದೆ.

‘ಹೊಸದಾಗಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವವರು, ಅದರ ಜತೆಯಲ್ಲೇ ಆಧಾರ್ ಸಂಖ್ಯೆಯನ್ನೂ ನೀಡಬೇಕು. ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿರುವವರೂ ಆಧಾರ್ ವಿವರವನ್ನು ಆಯೋಗಕ್ಕೆ ಸಲ್ಲಿಸಬೇಕು. ಇದಕ್ಕಾಗಿ ಜನಪ್ರತಿನಿಧಿಗಳ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ಆಯೋಗವು ತನ್ನ ಪತ್ರದಲ್ಲಿ ವಿವರಿಸಿದೆ.

‘2015ರಲ್ಲೇ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಆಯೋಗವು ಚಾಲನೆ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್‌ ಈ ಕ್ರಮಕ್ಕೆ ತಡೆ ನೀಡಿತ್ತು. ಕಾನೂನಿಗೆ ತಿದ್ದುಪಡಿ ತರುವುದು ಅನಿವಾರ್ಯ’ ಎಂದು ಕಾನೂನು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Post Comments (+)