ಗುರುವಾರ , ಜೂಲೈ 2, 2020
28 °C

ಕಿರು,ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಉದ್ಯಮಗಳಿಗೆ ಆರ್ಥಿಕ ಪ್ಯಾಕೇಜ್ ಸಹಕಾರಿ:ಮೋದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

narendra modi

ನವದೆಹಲಿ: ಕೊರೊನಾವೈರಸ್ ಲಾಕ್‌ಡೌನ್‌ನಿಂದಾಗಿ ಕುಸಿದಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಬುಧವಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. 

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಡಿದ ಘೋಷಣೆಗಳಿಂದ ವಿಶೇಷವಾಗಿ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ) ಮತ್ತು ಉದ್ಯಮಗಳು ಹಲವಾರು ಕಾಲಗಳಿಂದ ಅನುಭವಿಸುತ್ತಿದ ಸಮಸ್ಯೆಗಳಿಗೆ ಪರಿಹಾರ ಲಭಿಸಲಿದೆ. ಲಿಕ್ವಿಡಿಟಿಯನ್ನು ವರ್ಧಿಸಲು, ವಾಣಿಜ್ಯೋದ್ಯಮಿಗಳ ಸಬಲೀಕರಣ ಮತ್ತು ಸ್ಪರ್ಧಾತ್ಮಕ ಸ್ಫೂರ್ತಿಯನ್ನು ಬಲಪಡಿಸಲು ಇದು ನೆರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

 

ಕೋವಿಡ್-19ನಿಂದಾಗಿ ಕುಂದಿರುವ ಆರ್ಥಿಕತೆಯನ್ನು ಉತ್ತೇಜಿಸಲು ವಿತ್ತಸಚಿವೆ ನಿರ್ಮಲಾ ಸೀತಾರಾಮನ್  ಎಂಎಸ್ಎಂಇ ಮತ್ತು ಉದ್ಯಮಗಳಿಗೆ ಮೂಲಾಧಾರ ರಹಿತ ₹ 3ಲಕ್ಷ ಕೋಟಿ ಸಾಲ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:  2021 ಮಾರ್ಚ್ 31ರ ವರೆಗೆ ಟಿಡಿಎಸ್, ಟಿಸಿಎಸ್ ಶೇ.25ರಷ್ಟು ಕಡಿತ: ವಿತ್ತ ಸಚಿವೆ

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು