ಸೋಮವಾರ, ಮಾರ್ಚ್ 30, 2020
19 °C

ಕೊರೊನಾ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಅರ್ಥವ್ಯವಸ್ಥೆ ಸರ್ವನಾಶ: ರಾಹುಲ್ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್‌‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ದೇಶದ ಜನರು ಹಾಗೂ ದೇಶದ ಆರ್ಥಿಕ ವ್ಯವಸ್ಥೆ ಸರ್ವನಾಶವಾಗುತ್ತದೆ. ದೇಶದಲ್ಲಿ ಇಷ್ಟೊಂದು ಅನಾಹುತ ಸಂಭವಿಸಿದರೂ ಏನೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಮಂಕು ಕವಿದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ತಾವು ಮಾಡಿದ್ದ ಒಂದು ಟ್ವೀಟ್ ಅನ್ನೇ ಶುಕ್ರವಾರವೂ ಟ್ಯಾಗ್ ಮಾಡಿದ್ದು, ಕೊರೊನಾ ವೈರಸ್ ದೇಶದಾದ್ಯಂತ ಬೃಹದಾಕಾರವಾಗಿ ಕಾಣಿಸಿಕೊಂಡಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳದಿದ್ದರೆ, ಭಾರತದ ಅರ್ಥವ್ಯವಸ್ಥೆ ಸರ್ವನಾಶವಾಗುತ್ತದೆ ಎಂದು ಹೇಳಿದ್ದಾರೆ.

ಇದು ನಮ್ಮ ಜನರಿಗೆ ಹಾಗೂ ನಮ್ಮ ಅರ್ಥವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಮುಂಬೈ ಷೇರು ಪೇಟೆಯಲ್ಲಿ ಕೇವಲ 15 ನಿಮಿಷದಲ್ಲಿ 12 ಲಕ್ಷ ಕೋಟಿ ರೂ ನಷ್ಟ ಸಂಭವಿಸಿದೆ. ಬಂಡವಾಳ ಹೂಡಿಕೆದಾರರಲ್ಲಿ ತೀವ್ರ ಅಘಾತ ಉಂಟುಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು