ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾರೂಕ್‌ ಅಬ್ದುಲ್ಲಾ ವಿಚಾರಣೆ

Last Updated 31 ಜುಲೈ 2019, 18:51 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು–ಕಾಶ್ಮೀರ ಕ್ರಿಕೆಟ್‌ ಅಸೋಸಿಯೇಶನ್‌ (ಜೆಕೆಸಿಎ) ವಿರುದ್ಧ ಕೇಳಿ ಬಂದಿರುವ ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿದರು.

ಚಂಡೀಗಡದಲ್ಲಿರುವ ಇ.ಡಿ ಕಚೇರಿಗೆ ತೆರಳಿದ ಅಬ್ದುಲ್ಲಾ, ತಮ್ಮ ಹೇಳಿಕೆ ದಾಖಲಿಸಿದರು. ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿ ಅವರ ವಿರುದ್ಧ ಕಳೆದ ವರ್ಷ ಜುಲೈನಲ್ಲಿ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದ ನಂತರ ಇ.ಡಿ ಸಹ ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT