ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿದಂಬರಂ ಬಂಧಿಸಲು ಅನುಮತಿ ಕೋರಿದ ಇ.ಡಿ

ದೆಹಲಿ ಕೋರ್ಟ್ ವಿಶೇಷ ನ್ಯಾಯಾಧೀಶರಿಂದ ವಿಚಾರಣೆ; ಇಂದು ಅದೇಶ
Last Updated 14 ಅಕ್ಟೋಬರ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾದ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಲು ಅನುಮತಿ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಿಚಾರಣೆ ನಡೆಸಿದವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹಾರ್ , ಆದೇಶವನ್ನು ಮಂಗಳವಾರ ಪ್ರಕಟಿಸುವುದಾಗಿ ತಿಳಿಸಿದರು.

ಇ.ಡಿ ಪರವಾಗಿ ಕೋರ್ಟ್‌ಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾ ಅವರು, ‘ಚಿದಂಬರಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಕೂಡಾ ಅಭಿಪ್ರಾಯಪಟ್ಟಿದೆ’ ಎಂದು ಗಮನಕ್ಕೆ ತಂದರು.

ಹಣ ವರ್ಗಾವಣೆ ಆರೋಪ ಪ್ರತ್ಯೇಕ ಪ್ರಕರಣ ಎಂದು ಪ್ರತಿಪಾದಿಸಿದ ಅವರು, ಚಿದಂಬರಂ ಅವರನ್ನು ಬಂಧಿಸಲು ಅನುಮತಿ ಹಾಗೂ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಅರ್ಜಿಯನ್ನು ಸಲ್ಲಿಸಿದರು.

ಈ ನಡೆಯನ್ನು ಚಿದಂಬರಂ ಪರ ವಕೀಲ ಕಪಿಲ್‌ ಸಿಬಲ್‌ ವಿರೋಧಿಸಿದರು. ‘ಸಿಬಿಐ ಈಗಾಗಲೇ ಚಿದಂಬರಂ ಅವರನ್ನು ವಶಕ್ಕೆ ಪಡೆದಿದೆ. ಆರೋಪ ಒಂದೇ ಆಗಿರುವ ಕಾರಣ ಇಡಿ ವಶಕ್ಕೆ ಕೇಳುವುದರಲ್ಲಿ ಅರ್ಥವಿಲ್ಲ’ ಎಂದರು.

ಐಎನ್‌ಎಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತ ರಾಗಿರುವ ಚಿದಂಬರಂ ಅವರು ಅಕ್ಟೋಬರ್ 17ರವರೆಗೂ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

74 ವರ್ಷ ವಯಸ್ಸಿನ ಹಿರಿಯ ರಾಜಕಾರಣಿಯ ಹಾಜರಿ ಕೋರಿ ಜಾರಿ ನಿರ್ದೇಶನಾಲಯ ಶುಕ್ರವಾರ ಅರ್ಜಿ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT