ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ: ರಾಜ್ಯಗಳಿಂದ ಮಾಹಿತಿ ಕೇಳಿದ ಕೇಂದ್ರ

Last Updated 20 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳಿಗೆ ಹಣಕಾಸು ನೆರವು ಒದಗಿಸಿದೆ ಎಂಬ ಆರೋಪ ಹೊತ್ತಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಗೃಹ ಸಚಿವಾಲಯಕ್ಕೆ ವರದಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪಿಎಫ್‌ಐ ಪಾತ್ರ ಏನಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರವು ಕೆಲವು ರಾಜ್ಯಗಳಿಂದ ಮಾಹಿತಿ ಕೇಳಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್‌ಐ ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸಿ ಇ.ಡಿ. ವರದಿ ಸಿದ್ಧಪಡಿಸಿದೆ ಎಂದು ತಿಳಿದು ಬಂದಿದೆ. ಪಿಎಫ್ಐಗೆ ಸಂಬಂಧಿಸಿದ ಎನ್‌ಜಿಒ ಒಂದರ ವಿರುದ್ಧ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ. ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ತನ್ನ ಪಾತ್ರ ಏನೂ ಇಲ್ಲ ಎಂದು ಪಿಎಫ್‌ಐ ಹೇಳಿದೆ.

ಕೇರಳ ಮೂಲದ ಸಂಘಟನೆಯ ಪದಾಧಿಕಾರಿಗಳಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸಂಘಟನೆಯ ಹಣಕಾಸು ವ್ಯವಹಾರಗಳು, ಖರ್ಚು ಮತ್ತು ದೇಣಿಗೆ ಮೂಲಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಪದಾಧಿಕಾರಿಗಳ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ಇ.ಡಿ. ಮೂಲಗಳು ತಿಳಿಸಿವೆ.

ಪಿಎಫ್‌ಐ ಮತ್ತು ರೆಹಾಬ್‌ ಇಂಡಿಯಾ ಫೌಂಡೇಶನ್‌ಗೆ ಸಂಬಂಧಿಸಿದ ಬ್ಯಾಂಕ್‌ ಖಾತೆಗಳಲ್ಲಿ ಜಮೆ ಆಗಿರುವ ಮೊತ್ತದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಎರಡು ಸಂಘಟನೆಗಳ ಖಾತೆಗಳಿಗೆ ವಿವಿಧ ಸಂದರ್ಭಗಳಲ್ಲಿ ₹120 ಕೋಟಿ ಜಮೆ ಆಗಿದೆ.

‘ಸಿಎಎ ವಿರುದ್ಧದ ಪ್ರತಿಭಟನೆಗೆ ಸ್ವಲ್ಪ ಮೊದಲು ಖಾತೆಗಳಿಂದ ₹120 ಕೋಟಿ ಮೊತ್ತವನ್ನು ತೆಗೆಯಲಾಗಿದೆ ಎಂಬುದು ಆಧಾರರಹಿತ.

ಈ ಆರೋಪ ಮಾಡುತ್ತಿರುವವರು ಮೊದಲು ಸಾಬೀತುಪಡಿಸಲಿ’ ಎಂದು ಪಿಎಫ್‌ಐ ಈ ಹಿಂದೆಯೇ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT