ಸೋಮವಾರ, ಜೂಲೈ 6, 2020
22 °C

ಈದ್ ಉಲ್ ಫಿತ್ರ್: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈದ್‌ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶುಭಾಶಯ ಕೋರಿದ್ದಾರೆ. 

ಈದ್‌ ಶುಭಾಶಯ ಕೋರಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, 'ಈ ವಿಶೇಷ ಸಂದರ್ಭವು ಸಹಾನುಭೂತಿ, ಸಹೋದರತ್ವ ಮತ್ತು ಸಾಮರಸ್ಯದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿ ಹೊಂದುವಂತಾಗಲಿ' ಎಂದಿದ್ದಾರೆ. 

ಇದೇ ಸಂದರ್ಭದಲ್ಲಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರತಿಯೊಬ್ಬರಿಗೂ ಈದ್ ಮುಬಾರಕ್ ಎಂದು ಟ್ವೀಟ್‌ ಮಾಡಿದ್ದಾರೆ. 

ಈದ್-ಉಲ್-ಫಿತ್ರ್ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ಎಂದು ಟ್ವೀಟಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, 'ಈ ಹಬ್ಬವು ಸಾಮಾಜಿಕ ಸಾಮರಸ್ಯವನ್ನು ಮತ್ತಷ್ಟು ಬಲಪಡಿಸಲಿ ಮತ್ತು ನಮ್ಮ ದೇಶದಲ್ಲಿ ಹೆಚ್ಚು ಶಾಂತಿ ಮತ್ತು ನೆಮ್ಮದಿ ತರಲಿ ಎಂದು ಕೋರಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು