ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಪ್ರದೇಶ: ಹಿಂದಿಯಲ್ಲಿ 8 ಲಕ್ಷ ವಿದ್ಯಾರ್ಥಿಗಳು ಫೇಲ್‌

Last Updated 28 ಜೂನ್ 2020, 15:16 IST
ಅಕ್ಷರ ಗಾತ್ರ

ಲಖನೌ:ಉತ್ತರ ಪ್ರದೇಶ ಪ್ರೌಢ ಪರೀಕ್ಷಾ ಮಂಡಳಿಯು ಶನಿವಾರ ಫಲಿತಾಂಶ ಪ್ರಕಟಿಸಿದ್ದು, ಹಿಂದಿ ವಿಷಯದಲ್ಲಿ ಎಂಟು ಲಕ್ಷ ವಿದ್ಯಾರ್ಥಿಗಳು ಫೇಲಾಗಿದ್ದಾರೆ.

ಮಾತೃಭಾಷೆಯಲ್ಲಿಯೇ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ಫೇಲ್‌ ಆಗಿರುವ ಬಗ್ಗೆ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

2.70 ಲಕ್ಷ ವಿದ್ಯಾರ್ಥಿಗಳು ಮಧ್ಯಂತರ ಪರೀಕ್ಷೆಯಲ್ಲಿ ಪಾಸ್‌ ಆಗಲು ಅಶಕ್ತರಾಗಿದ್ದಾರೆ. ಜತೆಗೆ 5.28 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಉತ್ತೀರ್ಣಗೊಳ್ಳುವಷ್ಟು ಅಂಕ ಪಡೆಯಲಿಲ್ಲ. ಇನ್ನು 2.39 ಲಕ್ಷ ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯಲಿಲ್ಲ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಹಿಂದಿ ವಿಷಯದಲ್ಲಿ 10 ಲಕ್ಷ ವಿದ್ಯಾರ್ಥಿಗಳು ಫೇಲಾಗಿದ್ದರು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT