ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE: ಅನರ್ಹ ಶಾಸಕರಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಅ.21ಕ್ಕೆ ಉಪಚುನಾವಣೆ

ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಅ.21ಕ್ಕೆ: ಆಯೋಗ ಘೋಷಣೆ
Last Updated 21 ಸೆಪ್ಟೆಂಬರ್ 2019, 7:30 IST
ಅಕ್ಷರ ಗಾತ್ರ

ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಆರೋರಾ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

12:40 –ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಅಕ್ಟೋಬರ್ 24ಕ್ಕೆ ಪ್ರಕಟ.ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಘೋಷಣೆಯಾಗದ ಉಪಚುನಾವಣೆ

12:33 –ಅಕ್ಟೋಬರ್ 21ರಂದೇ ಕರ್ನಾಟಕದ 15 ವಿಧಾನಸಭಾಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ.ಕಾಂಗ್ರೆಸ್, ಜೆಡಿಎಸ್ ಶಾಸಕರು ಅನರ್ಹಗೊಂಡಿರುವುದರಿಂದ ತೆರವಾಗಿರುವ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ ಆಯೋಗ

12:32–ಉಮೇದುವಾರಿಕೆ ಸಲ್ಲಿಸಲು ಅಕ್ಟೋಬರ್ 4 ಕೊನೆಯದಿನ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 7 ಕೊನೆಯದಿನ

12:30 –ಅರುಣಾಚಲ ಪ್ರದೇಶ, ಬಿಹಾರ, ಛತ್ತೀಸಗಡ, ಅಸ್ಸಾಂ, ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮೇಘಾಲಯ, ಒಡಿಶಾ, ಪುದುಚೇರಿ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ ಒಟ್ಟು 64 ವಿಧಾನಸಭಾ ಕ್ಷೇತ್ರಗಳಿಗೂ ಅಕ್ಟೋಬರ್ 21ಕ್ಕೆ ಉಪಚುನಾವಣೆ

12:25 –ಅಕ್ಟೋಬರ್ 21ಕ್ಕೆ ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ. ಅಕ್ಟೋಬರ್ 24ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ

12:24 –ಚುನಾವಣಾ ಪ್ರಚಾರದ ವೇಳೆ ಪರಿಸರಕ್ಕೂ ಹಾನಿಯಾಗುತ್ತಿದೆ. ರಾಜಕೀಯ ಪಕ್ಷಗಳು ಆದಷ್ಟು ಪ್ಲಾಸ್ಟಿಕ್ ತ್ಯಜಿಸಿ ಪರಿಸರಸ್ನೇಹಿಯಾಗಿ ಪ್ರಚಾರ ಮಾಡಬೇಕು ಎಂದು ಮನವಿ ಮಾಡುತ್ತಿದ್ದೇವೆ: ಆರೋರಾ

12:22 –ಮಹಾರಾಷ್ಟ್ರದ ಗಡ್ಚಿರೋಲಿ ಮತ್ತು ಗೊಂಡಾದಲ್ಲಿ ಮತದಾನಕ್ಕೆ ವಿಶೇಷ ಭದ್ರತೆ ಕಲ್ಪಿಸಲಾಗುವುದು.

12:20 –ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗಿದೆ: ಆರೋರಾ

12:17 –ಸಾಮಾಜಿಕ ಮಾಧ್ಯಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ತಡೆಗೆ ಕ್ರಮ ಕೈಗೊಳ್ಳಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕೈಗೊಂಡಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ: ಆರೋರಾ ಮಾಹಿತಿ

12:15 –ಚುನಾವಣಾ ಘೋಷಣೆಯಾದ ಬಳಿಕ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಬಗ್ಗೆ ಪೊಲೀಸರು ಭದ್ರತಾ ಸಿಬ್ಬಂದಿಗೆ ತರಬೇತಿ ನೀಡುತ್ತಿರುವ ಬಗ್ಗೆ ಆಯುಕ್ತರಿಂದ ಮಾಹಿತಿ

12:10 –ಹರಿಯಾಣದಲ್ಲಿ 1.82 ಕೋಟಿ ಮತದಾರರಿದ್ದಾರೆ. ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರಿದ್ದಾರೆ: ಆರೋರಾ

12:05 – ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಅವಧಿ ಕ್ರಮವಾಗಿ ನವೆಂಬರ್ 2 ಮತ್ತು 9ಕ್ಕೆ ಕೊನೆಗೊಳ್ಳಲಿದೆ:ಸುನಿಲ್‌ ಆರೋರಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT