ನವದೆಹಲಿ:ಪ್ರಚೋದನಕಾರಿ ಭಾಷಣ ಮಾಡಿದ್ದ ಕೇಂದ್ರ ಸಚಿವ ಅನುರಾಗ್ಠಾಕೂರ್ ಮತ್ತು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರುಪ್ರಚಾರ ಕೈಗೊಳ್ಳದಂತೆಚುನಾವಣಾ ಆಯೋಗ ನಿಷೇಧ ಹೇರಿದೆ.

ಅನುರಾಗ್ ಠಾಕೂರ್ಗೆ ಮೂರು ದಿನಗಳು ಹಾಗೂ ವರ್ಮಾ ಅವರಿಗೆ ನಾಲ್ಕು ದಿನಗಳ ನಿಷೇಧವನ್ನು ಆಯೋಗ ವಿಧಿಸಿದೆ.

ಚುನಾವಣಾ ರ್ಯಾಲಿಗಳಲ್ಲಿ ನೀಡಿದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಚುನಾವಣಾ ಆಯೋಗ, ಇಬ್ಬರಿಗೂ ಷೋಕಾಸ್ ನೋಟಿಸ್ ನೀಡಿತ್ತು. ಅವರ ಪ್ರತಿಕ್ರಿಯೆ ಸಮರ್ಪಕವಾಗಿಲ್ಲ ಎಂದು ಹೇಳಿದ ಆಯೋಗದ ಅಧಿಕಾರಿಗಳು ಈ ನಿರ್ಧಾರ ಪ್ರಕಟಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಅನುರಾಗ್ ಠಾಕೂರ್, ‘ದೇಶದ್ರೋಹಿಗಳನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದಾಗ, ಪ್ರೇಕ್ಷಕರು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿದ್ದರು.

ಪಶ್ಚಿಮ ದೆಹಲಿ ಸಂಸದ ವರ್ಮಾ ಅವರು, ‘ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ರೀತಿಯಲ್ಲಿ ದೆಹಲಿಯಲ್ಲಿಯೂ ನಡೆಯಬಹುದು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ಬಾಗ್ದಲ್ಲಿ ನಡೆಸುತ್ತಿರುವ ಲಕ್ಷಾಂತರ ಪ್ರತಿಭಟನಕಾರರು ಮನೆಗಳಿಗೆ ನುಗ್ಗಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಬಹುದು’ ಎಂದು ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.