ಶನಿವಾರ, ಸೆಪ್ಟೆಂಬರ್ 26, 2020
22 °C

ಹರಿಯಾಣ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಇಂದು ಮಧ್ಯಾಹ್ನ ಪ್ರಕಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಮಧ್ಯಾಹ್ನ ಪ್ರಕಟಿಸುವ ಸಾಧ್ಯತೆಗಳಿವೆ. 

ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ ಮಾಧ್ಯಮಗೋಷ್ಠಿ ನಡೆಸಲಿದ್ದು ಈ ವೇಳೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ. 

 ಚುನಾವಣೆ ದಿನಾಂಕ ಪ್ರಕಟವಾದರೆ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಬಹುತೇಕ ಆಕ್ಟೋಬರ್‌ ತಿಂಗಳಲ್ಲೇ ಚುನಾವಣೆ ನಡೆದು ಫಲಿತಾಂಶ ಹೊರ ಬೀಳಲಿದೆ. 

2014ರ ಆಕ್ಟೋಬರ್‌ 15 ರಂದು ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಕ್ಟೋಬರ್‌ 19ರಂದು ಫಲಿತಾಂಶ ಹೊರಬಂದಿತ್ತು.

 ಮಹಾರಾಷ್ಟ್ರದ  288 ವಿಧಾನಸಭಾ ಕ್ಷೇತ್ರಗಳು ಹಾಗೂ ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು