ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಸೇರಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟ ಆಯೋಗ

ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ
Last Updated 29 ಜನವರಿ 2020, 10:27 IST
ಅಕ್ಷರ ಗಾತ್ರ

ನವದೆಹಲಿ: ವಿವಾದಿತ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಪಶ್ಚಿಮ ದೆಹಲಿಯ ಸಂಸದ ಪರ್ವೇಶ್ ವರ್ಮಾ ಅವರನ್ನು ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಚುನಾವಣಾ ಆಯೋಗ ಕೈಬಿಟ್ಟಿದೆ.

ಕಳೆದ ಶನಿವಾರ ದೆಹಲಿ ಚುನಾವಣೆಯನ್ನು ಇಂಡಿಯಾ ಮತ್ತು ಪಾಕಿಸ್ತಾನಗಳ ನಡುವೆ ಸ್ಪರ್ಧೆ ಎಂದು ಬಣ್ಣಿಸಿದ್ದದೆಹಲಿಯ ಮಾಡಲ್ ಟೌನ್ ಅಭ್ಯರ್ಥಿ ಕಪಿಲ್ ಮಿಶ್ರಾ ಅವರಿಗೆ 48 ಗಂಟೆಗಳ ಕಾಲ ಯಾವುದೇ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿತ್ತು.

ಈಗ ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಹಾಗೂ ಸಂಸದ ವರ್ಮಾ ಅವರನ್ನುದೆಹಲಿ ವಿಧಾನಸಭಾ ಚುನಾವಣೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆಯೋಗ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಟ್ಟಿದೆ.

ಸಂಸದ ಪರ್ವೇಶ್ ವರ್ಮಾ ಶಹೀನಾಬಾಗ್‌‌ನಲ್ಲಿ ನೆರೆದಿದ್ದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವಾಗ ಪ್ರಚೋದನಕಾರಿ ಭಾಷಣ ಮಾಡಿ, ಕೊಲೆ, ಅತ್ಯಾಚಾರ ಎಂಬ ಆಕ್ಷೇಪಾರ್ಯ ಪದಗಳನ್ನು ಬಳಸಿದ್ದರು.ಕೇಂದ್ರ ಸಚಿವ ಅನುರಾಗ್ ಠಾಕೂರ್ ಬಿಜೆಪಿ ಅಭ್ಯರ್ಥಿ ಮನೀಷ್ ಚೌದರಿ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು 'ಗೋಲಿ ಮಾರ್ ಸು....ಕೋ ಎಂಬ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.ಈ ಇಬ್ಬರ ಹೇಳಿಕೆಗಳನ್ನು ರಾಜಕೀಯ ವಿಶ್ಲೇಷಕರು ಹಾಗೂ ವಿರೋಧ ಪಕ್ಷಗಳ ಮುಖಂಡರು ಆಕ್ಷೇಪಿಸಿದ್ದು,
ಇದು ಕೋಮುಭಾವನೆಯನ್ನು ಕೆರಳಿಸುವ ಆ ಮೂಲಕ ದೇಶ ವಿಭಜಿಸುವ ಕೃತ್ಯವಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಬುಧವಾರ ಬಿಜೆಪಿಯ ದೆಹಲಿ ಘಟಕದ ವಕ್ತಾರ ಹರೀಶ್ ಖುರಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿ, ವಿಡಿಯೋದಲ್ಲಿ ನೋಡಿದಾಗ ಈ ರೀತಿಯ ಯಾವುದೇ ಹೇಳಿಕೆಗಳನ್ನು ಠಾಕೂರ್ ಬಳಸಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT