ಲೋಕಸಭಾ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ

ಬುಧವಾರ, ಜೂನ್ 19, 2019
26 °C

ಲೋಕಸಭಾ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ

Published:
Updated:

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳು ಸೇರಿದಂತೆ ದೇಶದ 542 ಲೋಕಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಯಿತು.

ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್‌ ರೂಂ ಅನ್ನು ತೆರೆದು ಮತ ಎಣಿಗೆ ಅನುವು ಮಾಡಿಕೊಟ್ಟರು. ಮೊದಲಿಗೆ ಅಂಚೆ ಮತಗಳ ಎಣಿಕೆಯನ್ನು ಆರಂಭಿಸಲಾಯಿತು. ನಂತರ ಸಿಬ್ಬಂದಿಗಳು ಮತಯಂತ್ರಗಳನ್ನು ತೆಗೆದುಕೊಂಡು ಎಣಿಕೆ ಕಾರ್ಯವನ್ನು ಆರಂಭಿಸಿದರು. 

ಮತ ಎಣಿಕೆ ಕೇಂದ್ರಗಳ ಸುತ್ತ ಪೊಲೀಸ್‌ ಬಂದೋ ಬಸ್ತ್‌ ಮಾಡಲಾಗಿದೆ. ಮೊಬೈಲ್‌ ಫೋನ್‌, ಐ–ಪಾಡ್‌, ಲ್ಯಾಪ್‌ಟಾಪ್‌ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಸಾಧನಗಳನ್ನು ಒಯ್ಯುವಂತಿಲ್ಲ. ಚುನಾವಣಾ ಆಯೋಗದ ವೀಕ್ಷಕರು, ಚುನಾವಣಾಧಿಕಾರಿಗಳಿಗೆ ಮಾತ್ರ ಚುನಾವಣಾ ಉದ್ದೇಶಕ್ಕಾಗಿ ಮಾತ್ರ ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಒಯ್ಯಲು ಅವಕಾಶವಿದೆ.

ಲೋಕಸಭೆಯಲ್ಲಿ ಒಟ್ಟು 543 ಕ್ಷೇತ್ರಗಳಿವೆ. ಆದರೆ, ಈ ಬಾರಿ 542 ಕ್ಷೇತ್ರಗಳಿಗೆ ಮಾತ್ರ ಮತದಾನ ನಡೆದಿದೆ. ಅತಿಯಾದ ಹಣ ಬಳಕೆಯಾಗಿದೆ ಎಂಬ ಕಾರಣಕ್ಕೆ ತಮಿಳುನಾಡಿನ ವೆಲ್ಲೂರು ಕ್ಷೇತ್ರದ ಮತದಾನವನ್ನು ಆಯೋಗವು ರದ್ದು ಮಾಡಿದೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !