ನವದೆಹಲಿ: ಮುಕ್ತ, ನ್ಯಾಯಸಮ್ಮತ ಮತ್ತು ನೈತಿಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಮತ್ತು ಜನರು ಸಹಕಾರ ಕೊಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಕೋರಿದ್ದಾರೆ. 23ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅವರು ಭಾನುವಾರ ಅಧಿಕಾರ ವಹಿಸಿಕೊಂಡರು. ಈ ಹುದ್ದೆಯಲ್ಲಿದ್ದ ಒ.ಪಿ. ರಾವತ್ ಅವರು ಶನಿವಾರ ನಿವೃತ್ತರಾಗಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಮಹಾರಾಷ್ಟ್ರ, ಹರಿಯಾಣ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳ ಚುನಾವಣೆಗಳು ಆರೋರಾ ನೇತೃತ್ವದಲ್ಲಿಯೇ ನಡೆಯಲಿವೆ. 2021ರ ಅಕ್ಟೋಬರ್ನಲ್ಲಿ ಅವರು ನಿವೃತ್ತರಾಗಲಿದ್ದಾರೆ. 2017ರ ಆಗಸ್ಟ್ 31ರಂದು ಅವರು ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದರು.

ಅವರು 1980ರ ತಂಡದ ರಾಜಸ್ಥಾನದ ಕೇಡರ್ನ ಐಎಎಸ್ ಅಧಿಕಾರಿ. ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯಗಳ ಕಾರ್ಯದರ್ಶಿಯಾಗಿ ಅವರು ಕೆಲಸ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.