ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ರಾಜ್ಯಮಟ್ಟದಲ್ಲಿ ಮಾತುಕತೆ– ಯೆಚೂರಿ

Last Updated 14 ಜನವರಿ 2019, 18:31 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ‘ರಾಜ್ಯಗಳಲ್ಲಿನ ರಾಜಕೀಯ ಸ್ಥಿತಿಗತಿ ವಿಭಿನ್ನವಾಗಿರುವುದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಜತೆಗಿನ ಸ್ಥಾನ ಹೊಂದಾಣಿಕೆಯ ಮಾತುಕತೆ ಆಯಾ ರಾಜ್ಯ ಮಟ್ಟದಲ್ಲಿಯೇ ನಡೆಯಲಿದೆ’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಹಾಗೂ ಬಿಜೆಪಿಯನ್ನು ಸೋಲಿಸಲು ಸಿಪಿಎಂ ರಾಜ್ಯ ನಾಯಕತ್ವ ಕಾಂಗ್ರೆಸ್‌ ಜತೆಗೆ ಚುನಾವಣಾ ಮೈತ್ರಿಗೆ ಒಲವು ವ್ಯಕ್ತಪಡಿಸಿದ ಬೆನ್ನಲ್ಲೇ ಯೆಚೂರಿ ಈ ಹೇಳಿಕೆ ನೀಡಿದ್ದಾರೆ.

‘ಸಮಾಜವಾದಿ ಪಾರ್ಟಿ ಹಾಗೂ ಬಹುಜನ ಸಮಾಜ ಪಾರ್ಟಿ ಮೈತ್ರಿ ಸಕಾರಾತ್ಮಕ ಬೆಳವಣಿಗೆಯಾಗಿದೆ. ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ವಿರೋಧಿ ಜಾತ್ಯತೀತ ಹಾಗೂ ಪ್ರಜಾಸತ್ತಾತ್ಮಕ ಒಕ್ಕೂಟದ ಅಧಿಕಾರವನ್ನು ನಿರೀಕ್ಷಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗಾಗಿ ಪಶ್ಚಿಮ ಬಂಗಾಳದಲ್ಲಿ ಸ್ಥಾನ ಹೊಂದಾಣಿಕೆಗೆ ಕಾಂಗ್ರೆಸ್‌ ನಾಯಕರು ಒಲವು ಹೊಂದಿದ್ದಾರೆ. ಈಗಾಗಲೇ ಕೆಲವುನಾಯಕರು ಸಿಪಿಎಂ ನಾಯಕರೊಂದಿಗೆ ಸ್ಥಾನ ಹೊಂದಾಣಿಕೆ ಕುರಿತುಅನೌಪಚಾರಿಕ ಮಾತುಕತೆ ನಡೆಸಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT