ಸೋಮವಾರ, ಏಪ್ರಿಲ್ 12, 2021
23 °C

ಎನ್‌ಕೌಂಟರ್‌ಗೆ ಉಗ್ರ ಸೇರಿ ಇಬ್ಬರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಉಗ್ರ ಸೇರಿ ಇಬ್ಬರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶೋಪಿಯಾನ್‌ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಒಟ್ಟು ನಾಲ್ವರು ಉಗ್ರರು ಮತ್ತು ಉಗ್ರರ ಜತೆಗೆ ನಂಟು ಹೊಂದಿದ್ದ ಸಹಚರನೊಬ್ಬನನ್ನು ಹೊಡೆದುರುಳಿಸಲಾಗಿದೆ.

ಪುಲ್ವಾಮಾ ಜಿಲ್ಲೆಯ ಅವಂತಿಪೊರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿರುವ ಉಗ್ರರನ್ನು ಯಾವರ್‌ ಅಹ್ಮದ್‌ ನಜರ್‌ ಮತ್ತು ಪಾಕಿಸ್ತಾನದ ಉಮರ್‌ ಎಂದು ಗುರುತಿಸಲಾಗಿದೆ. ಇವರು ಜೈಶ್‌–ಎ–ಮೊಹಮ್ಮದ್‌ ಸಂಘಟನೆಗೆ ಸೇರಿದವರಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈ ಇಬ್ಬರೂ, ಕಣಿವೆ ಪ್ರದೇಶದಲ್ಲಿ ಅನೇಕ ಕಡೆ ಭಯೋತ್ಪಾದಕ ಕೃತ್ಯ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು