ಶುಕ್ರವಾರ, ಜೂನ್ 18, 2021
24 °C

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

 

ಶ್ರೀನಗರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಶುಕ್ರವಾರ ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ‌‌ಹತ್ಯೆಯಾಗಿದ್ದಾರೆ. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭದ್ರತಾಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ಫಜಲ್‌ಪುರದ ಬಳಿ ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ ಉಗ್ರರು, ಭದ್ರತಾಪಡೆ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆಸಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಮಾಹಿತಿ ನೀಡಿದರು.

Jammu and Kashmir: Two terrorists neutralised and one soldier killed in action in an ongoing encounter in Sopore. pic.twitter.com/dGGiJe9eAX

*

*

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು