ಕಾಶ್ಮೀರ: ಸೇನೆ ತೊರೆದು ಹಿಜ್ಬುಲ್ ಸೇರಿದ್ದವ ಸೇರಿ ಇಬ್ಬರು ಉಗ್ರರ ಹತ್ಯೆ

7

ಕಾಶ್ಮೀರ: ಸೇನೆ ತೊರೆದು ಹಿಜ್ಬುಲ್ ಸೇರಿದ್ದವ ಸೇರಿ ಇಬ್ಬರು ಉಗ್ರರ ಹತ್ಯೆ

Published:
Updated:

ಶ್ರೀನಗರ: ಸೇನೆ ತೊರೆದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಗುಂಪು ಸೇರಿದ್ದ ವ್ಯಕ್ತಿ ಸೇರಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಕಾಶ್ಮೀರದ ಶೋಪಿಯಾನ್‌ನಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿವೆ. ಈ ಪ್ರದೇಶದಲ್ಲಿ ಅಡಗಿರಬಹುದಾದ ಇತರ ಉಗ್ರರಿಗಾಗಿ ಭದ್ರತಾಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. 

‘ಮೃತ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್‌ ಜೊತೆಗೆ ಗುರುತಿಸಿಕೊಂಡಿದ್ದರು. ಭದ್ರತಾ ಪಡೆಗಳು ಮತ್ತು ಸಾರ್ವಜನಿಕರ ಮೇಲೆ ದಾಳಿ ನಡೆಸಿದ್ದರು’ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ. ಎನ್‌ಕೌಂಟರ್‌ ವೇಳೆ ಭದ್ರತಾ ಪಡೆಗಳಿಗೆ ಯಾವುದೇ ಹಾನಿಯಾಗಿಲ್ಲ.

‘ಜಮ್ಮು ಅಂಡ್ ಕಾಶ್ಮೀರ್ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ 20ರ ಹರೆಯದ ಇದ್ರೀಸ್ ಸುಲ್ತಾನ್ ಕಳೆದ ಏಪ್ರಿಲ್‌ನಲ್ಲಿ ಉಗ್ರರ ಗುಂಪು ಸೇರಿಕೊಂಡಿದ್ದರು.

ಎನ್‌ಕೌಂಟರ್‌ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮನೆಗಳಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಸಾಕಷ್ಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !