ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡಿರುವ ಉತ್ತರ ಪ್ರದೇಶದ ಅಮೇಥಿಯಲ್ಲಿ ಮಂಗಳವಾರ ಪ್ರಚಾರ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿ ಅವರು ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಇಂಥ ಮೂರ್ಖತನದ ಚರ್ಚೆಗಳನ್ನುನಾನೆಂದೂ ಕೇಳಿರಲಿಲ್ಲ. ರಾಹುಲ್ ಗಾಂಧಿ ಭಾರತದಲ್ಲೇ ಹುಟ್ಟಿದ್ದು, ಭಾರತದಲ್ಲೇ ಬೆಳೆದದ್ದು. ಇದು ಇಡೀ ಭಾರತಕ್ಕೆ ತಿಳಿದ ವಿಚಾರ,’ ಎಂದು ಅವರು ಹೇಳಿದ್ಧಾರೆ.