ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶ: ‘ಸುಪ್ರೀಂ’ಗೆ ಮೊರೆ

Last Updated 16 ಏಪ್ರಿಲ್ 2019, 2:45 IST
ಅಕ್ಷರ ಗಾತ್ರ

ನವದೆಹಲಿ: ಮಹಿಳೆಯರು ಮಸೀದಿಗಳನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ ಪುಣೆ ಮೂಲದ ಮುಸ್ಲಿಂ ದಂಪತಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಮಹಿಳೆಯರು ಮಸೀದಿ ಪ್ರವೇಶಿಸುವುದನ್ನು ತಡೆಯುವುದು ಅಸಾಂವಿಧಾನಿಕ ಕ್ರಮ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಯಾಸ್ಮಿನ್‌ ಮತ್ತು ಜುಬೇದ್‌ ಅಹ್ಮದ್‌ ಪೀರಜಾದೆ ಅವರು ಜಂಟಿ ಅರ್ಜಿಯಲ್ಲಿ ಹೇಳಿದ್ದಾರೆ.

ಮಸೀದಿಗಳಿಗೆ ಮಹಿಳೆಯರ ಪ್ರವೇಶ ನಿಷೇಧಿಸಬೇಕೆಂದು ಪ್ರವಾದಿ ಮೊಹಮ್ಮದ್‌ ಅವರಾಗಲೀ ಅಥವಾ ಪವಿತ್ರ ಗ್ರಂಥ ಕುರಾನ್‌ನಲ್ಲಾಗಲೀ ಹೇಳಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT