ಸೋಮವಾರ, ಮಾರ್ಚ್ 30, 2020
19 °C

ಐರೋಪ್ಯ ಒಕ್ಕೂಟದ ಸಂಸದರ ನಿಯೋಗ ಕಾಶ್ಮೀರಕ್ಕೆ ಬಂದಿದ್ದು 'ಖಾಸಗಿ ಭೇಟಿ': ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Members of European Union Parliamentary delegation during a shikara ride at Dal Lake in Srinagar

ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಐರೋಪ್ಯ ಒಕ್ಕೂಟದ ಸಂಸದರ ನಿಯೋಗವು ಕಾಶ್ಮೀರಕ್ಕೆ ಭೇಟಿ ನೀಡಿತ್ತು. ಇದು ಖಾಸಗಿ ಭೇಟಿ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿದೆ.

ಐರೋಪ್ಯ ಒಕ್ಕೂಟದ 27 ಸಂಸದರ ನಿಯೋಗವು 2019 ಅಕ್ಟೋಬರ್ 28 ರಂದು ಕಾಶ್ಮೀರಕ್ಕೆ ಭೇಟಿ ನೀಡಿತ್ತು. ಇದರಲ್ಲಿ ವಿವಿಧ ಪಕ್ಷಗಳ ಪ್ರತಿನಿಧಿಗಳಿದ್ದರು. ನವೆಂಬರ್ 1ರವರೆಗೆ ಈ ನಿಯೋಗ ಕಾಶ್ಮೀರದಲ್ಲಿತ್ತು. ದೆಹಲಿ ಮೂಲದ ಚಿಂತಕರ ಚಾವಡಿ ಇಂಟರ್‌ನ್ಯಾಷನಲ್ ಇನ್ಸಿಟ್ಯೂಟ್ ಫಾರ್ ನಾನ್‌ಅಲೈನ್‌ಡ್ ಸ್ಟಡೀಸ್ ಈ ನಿಯೋಗವನ್ನು ಕಾಶ್ಮೀರಕ್ಕೆ ಆಮಂತ್ರಿಸಿದ್ದು ಇದು  ಖಾಸಗಿ ಭೇಟಿಯಾಗಿತ್ತು ಎಂದು ಕೇಂದ್ರ ಗೃಹಸಚಿವಾಲಯದ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ಅಗತ್ಯ: ಮೋದಿ

ಕಾಶ್ಮೀರಕ್ಕೆ ಯುರೋಪ್ ಸಂಸದರ ನಿಯೋಗ ಭೇಟಿ ನೀಡಿದಾಗ ಅದರ ಖರ್ಚು ವೆಚ್ಚವನ್ನು ಯಾರು ವಹಿಸಿದ್ದರು ಎಂಬ ಪ್ರಶ್ನೆಗಳಿಗೆ ರೆಡ್ಡಿ ಈ ಉತ್ತರ ನೀಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿಇತರರರು ಮಧ್ಯಪ್ರವೇಶಿಸಬಾರದು ಎಂಬ ನೀತಿಯನ್ನು ಕೇಂದ್ರ ಸರ್ಕಾರ ಅಲ್ಲಗೆಳೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು , ಪಾಕಿಸ್ತಾನದೊಂದಿನ  ಮಾತುಕತೆ ಉಭಯ ರಾಷ್ಟ್ರಗಳ ನಡುವಿನ ಮಾತುಕತೆ ಮಾತ್ರ ಆಗಲಿದೆ. ಇದರಲ್ಲಿ ಮೂರನೆಯವರು ಮಧ್ಯಪ್ರವೇಶಿಸುವಂತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಭಾರತಕ್ಕೆ ಬೆಂಬಲ: ಯುರೋಪ್ ಸಂಸದರ ನಿಯೋಗ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು