ಮಂಗಳವಾರ, ಸೆಪ್ಟೆಂಬರ್ 24, 2019
29 °C

ನಾನೂ ದಂಡ ಭರಿಸಿದ್ದೇನೆ: ಸಚಿವ ಗಡ್ಕರಿ

Published:
Updated:
Prajavani

ಮುಂಬೈ : ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಭಾರಿ ದಂಡ ವಿಧಿಸಲಾಗುತ್ತಿದೆ ಎಂಬ ಆತಂಕ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಸಹ ಬಾಂದ್ರಾ–ವರ್ಲಿ ಸೀ ಲಿಂಕ್‌ ರಸ್ತೆಯಲ್ಲಿ ವೇಗವಾಗಿ ವಾಹನ ಓಡಿಸಿದ್ದಕ್ಕೆ ದಂಡ ಭರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 100 ದಿನಗಳ ಸಾಧನೆಗಳನ್ನು ವಿವರಿಸಲು ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, ಅವರು ಈ ವಿಷಯವನ್ನು ತಿಳಿಸಿದ್ದಾರೆ. ಭ್ರಷ್ಟಾಚಾರ ಹೋಗಲಾಡಿಸಿ ಪಾರದರ್ಶಕತೆ ತರುವ ಉದ್ದೇಶವನ್ನು ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಹೊಂದಿದೆ ಎಂದು ತಿಳಿಸಿದರು.

Post Comments (+)